ತುಂಗ ಮೇಲ್ದಂಡೆಯಲ್ಲಿ ನೀರು ಹರಿಸಲು ತೀರ್ಮಾನ-ಎಚ್ಚರಿಕೆಯ ಪ್ರಕಟಣೆ

ಸುದ್ದಿಲೈವ್/ಶಿವಮೊಗ್ಗ

ತುಂಗಾ ಮೇಲ್ದಂಡೆ ಮುಖ್ಯ ಕಾಲುವೆಯಲ್ಲಿ ನೀರು ಹರಿಸುವ ಕುರಿತು ಕರ್ನಾಟಕ ನೀರಾವರಿ ನಿಗಮದ ತುಂಗ ಮೇಲ್ದಂಡೆಯಿಂದ ಪ್ರಕಟಣೆ ಹೊರಡಿಸಿದೆ.‌ ಎಚ್ಚರಿಕೆಯಿಂದರಿಲು ಸೂಚನೆ ನೀಡಿದೆ.

ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ ನೀರು ಹರಿಸಿಲು ನಿರ್ಧಾರಿಸಲಾಗಿದೆ. 03-07-2024 ರಿಂದ 10-11-2024 ರವರೆಗೆ ಜಲಾಶಯದಲ್ಲಿ ನೀರಿನ ಲಭ್ಯತೆ ಅನುಸಾರ ನೀರು ಹರಿಸಲು ತೀರ್ಮಾನಿಸಲಾಗಿದೆ.

ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಅಚ್ಚುಕಟ್ಟು ರೈತರು ಹಾಗೂ ಸಾರ್ವಜನಿಕರ, ಜನ, ಜಾನುವಾರುಗಳೊಂದಿಗೆ ಯಾವುದೇ ಚಟುವಟಿಎಕಗಳನ್ನು ಮಾಡದೇ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ ನೀರಾವರಿ ನಿಗಮ ನಿಯಮಿತದ ತುಂಗಾ ಮೇಲ್ದಂಡೆ ಯೋಜನೆ ಕಾರ್ಯಪಾಲಕ ಇಂಜಿನಿಯರ್ ವಿಭಾಗ ಪ್ರಕಟಿಸಿದೆ.

ಇದನ್ನೂ ಓದಿ-https://suddilive.in/archives/18242

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close