ಸುದ್ದಿಲೈವ್/ಶಿವಮೊಗ್ಗ
ಸಿ ಬಿ ಆರ್ ಕಾನೂನು ಕಾಲೇಜು ಮತ್ತು ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರ ಶಿವಮೊಗ್ಗ, ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಗುರು ಪೂರ್ಣಿಮೆಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದಂತಹ ಎಸ್ ಎನ್ ನಾಗರಾಜ್ ರವರು ಆಗಮಿಸಿದ್ದರು ಹಾಗೂ ಈ ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಾಪಕರಾದಂತಹ ಡಾ. ಬಿ ಸಿ ಬಸಪ್ಪ, ಡಾ. ಆದರ್ಶ ಎಂ ಎನ್, ಹಾಗೂ ಸಹಾಯಕ ಪ್ರಾಧ್ಯಾಪಕರಾದಂತಹ ಮಹಾಂತೇಶ್ ಗೌಡ,
ಛಾಯಕುಮಾರ್, ಅನುಪಮಾ ಬಿ.ಯು ಇವರ ಉಪಸ್ಥಿತಿಯಲ್ಲಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಅಂತಹ ಡಾ. ಎ. ಅನಲರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಹಾಗೂ ಗ್ರಂಥಪಾಲಕರಿಗೆ ಮತ್ತು ಸಹಾಯಕ ಸಿಬ್ಬಂದಿಗಳಿಗೆ ಕಿರು ನೆನಪಿನ ಕಾಣಿಕೆಯ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು.
ಇದನ್ನೂ ಓದಿ-https://www.suddilive.in/2024/07/blog-post_916.html