ಸುದ್ದಿಲೈವ್/ಶಿವಮೊಗ್ಗ
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿ ಸಿ ಬಸ್ಸೊಂದು ಕಂದಕಕ್ಕೆ ಉರುಳಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆ ಸಮೀಪದ ಬಪ್ಪನಮನೆ ಗ್ರಾಮದಲ್ಲಿ ಘಟನೆ ನಡೆದಿದೆ.
ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಇದರಲ್ಲಿ 15ಕ್ಕೂ ಪ್ರಯಾಣಿಕರಿಗೆ ಗಾಯಗಳಾಗಿವೆ. ಸ್ಥಳೀಯರ ಸಹಾಯದಿಂದ ಪ್ರಯಾಣಿಕರ ರಕ್ಷಣೆ ಸಹ ನಡೆದಿದೆ.
ಮುಂದೆಯಿಂದ ಬರುತ್ತಿದ್ದ ವಾಹನವನ್ನ ತಪ್ಪಿಸಲು ಹೋಗಿ ಈ ಅವಘಢ ಸಂಭವಿಸಿದೆ. ಬೆಂಗಳೂರಿನಿಂದ ಭಟ್ಕಳ್ಳಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಹೊರಟಿತ್ತು. ಬಪ್ಪನಮನೆಯ ಬಳಿ ಎದುರಿನಿಂದ ಗೂಡ್ಸ್ ವಾಹನ ಬಂದಿದ್ದು, ಅವಘಡ ಸಂಭವಿಸಿದೆ.
ಅದೃಷ್ಟವಶಾತ್ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಗಾಯಳುಗಳನ್ನು ಸಮೀಪದ ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಎಂಎಸ್ ವಾಹನಕ್ಕೆ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಹೋಗಿ ಅವಘಡ ಸಂಭವಿಸಿದೆ. ಸಿಎಂಎಸ್ ವಾಹನದ ಮುಂಭಾಗ ಕೂಡ ಜಖಂ ಆಗಿದೆ. ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ-https://suddilive.in/archives/18236