ಸುದ್ದಿಲೈವ್/ಶಿವಮೊಗ್ಗ
ಚಂದ್ರಯಾನ-3 ಮಿಷನ್‌ನ ಯಶಸ್ಸನ್ನು ಆಚರಿಸಲು ಭಾರತ ಸರ್ಕಾರವು ಪ್ರತಿ ವರ್ಷ ಆಗಸ್ಟ್ 23 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಘೋಷಿಸಿದ್ದು, ಇದರ ಅಂಗವಾಗಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ರಾಜ್ಯ ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶ ವಿಜ್ಞಾನದ ಕುರಿತು ಆಸಕ್ತಿ ಮೂಡಿಸಲು ಗಗನಯಾತ್ರಿ ಹಾಗೂ ಬಾಹ್ಯಾಕಾಶ ವಿಜ್ಞಾನಿಗಳ ಕೊಡುಗೆಗಳ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಅನೇಕ ವಿಜ್ಞಾನ ಚಟುವಟಿಕೆಗಳನ್ನು ಆಯೋಜಿಸಿದೆ.
ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪಂಚಾಯತಿಯು ದಿ: 23/08/2024 ರಂದು ಬೆಳಗ್ಗೆ 10.30 ಕ್ಕೆ ನಗರದ ಡಿವಿಎಸ್ ಪಿಯು ಸ್ವತಂತ್ರ ಕಾಲೇಜಿನಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಇಸ್ರೋ ಸಂಸ್ಥೆಯಿಂದ ಸಂಪನ್ಮೂಲ ವ್ಯಕ್ತಿಯಾಗಿ ವಿಜ್ಞಾನಿಗಳು ಆಗಮಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಎನ್‌ಆರ್‌ಡಿಎಂಎಸ್ ಕೇಂದ್ರದ ಶಂಕರ್ ಪಿ. -9036710230 ಇವರನ್ನು ಸಂಪರ್ಕಿಸುವುದು.