ಸೋಮವಾರ, ಆಗಸ್ಟ್ 19, 2024

ಝಿಕಾ ವೈರಸ್ ಗೆ 73 ವರ್ಷದ ವೃದ್ಧ ಬಲಿ




ಸುದ್ದಿಲೈವ್/ಶಿವಮೊಗ್ಗ


ಝೀಕಾ ವೈರಸ್ ಗೆ ಮಲೆನಾಡಿನಲ್ಲಿ ಓರ್ವ ಬಲಿಯಾಗಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.  ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 9 ಝೀಕಾ ವೃರಸ್ ಗೆ ಬಲಿಯಾಗಿದೆ. ಶಿವಮೊಗ್ಗದಲ್ಲಿ 3 ಮತ್ತು ಬೆಂಗಳೂರಿನಲ್ಲಿ 6 ಪ್ರಕರಣಗಳು ಪತ್ತೆಯಾಗಿದೆ, ಈ ವೃದ್ಧರಲ್ಲಿ ಜೂನ್ ತಿಂಗಳಿನಲ್ಲೇ ಝಿಕಾ ವೈರಸ್ ಪತ್ತೆಯಾಗಿತ್ತು.73 ವರ್ಷದ ವೃದ್ಧ ಝೀಕಾ ವೈರಸ್‌ಗೆ ಮೃತಪಟ್ಟಿದ್ದಾರೆ. 


ಗರ್ಭಿಣಿ ಹಾಗೂ ಮಗು ಸುರಕ್ಷಿತ

ವೈರಸ್‌ಗೆ ತುತ್ತಾಗಿದ್ದ ಗರ್ಭೀಣಿ ಸ್ತ್ರೀಯರ ಆರೈಕೆಗೆ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗರ್ಭಿಣಿಯರ ಸಂಪರ್ಕಕ್ಕೆ ಬಂದವರ ತಪಾಸಣೆ ನಡೆಸುವಂತೆ ಕೂಡ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸೂಚನೆ ನೀಡಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಇಬ್ಬರು ಝೀಕಾ ವೈರಸ್‌ ತುತ್ತಾಗಿದ್ದ ಇಬ್ಬರು ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಗಣಿಯಲ್ಲಿ ಝೀಕಾ ವೈರಸ್ ಕಂಡುಬಂದಿದ್ದ ಗರ್ಭಿಣಿಗೆ ಹೆರಿಗೆಯಾಗಿದ್ದು ತಾಯಿ-ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ. ಇನ್ನುಳಿದ ನಾಲ್ವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿಯಲ್ಲಿ ತಿಳಿಸಿದೆ.


ಝೀಕಾ ವೈರಸ್‌ನ ಲಕ್ಷಣಗಳೇನು?


ಕಣ್ಣು ಕೆಂಪಾಗುವಿಕೆ, ತಲೆ ನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಗಳು, ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುವುದು ಝೀಕಾ ವೈರಸ್‌ನ ಪ್ರಮುಖ ಲಕ್ಷಣಗಳಾಗಿದ್ದು, ಈ ಲಕ್ಷಣ ಹೊಂದಿರುವವರು ಕೂಡಲೆ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳುವಂತೆಯು ಆತರೋಗ್ಯ ಇಲಾಖೆ ಮಾಹಿತಿ ನೀಡಿದೆ.


ರೋಗದ ಲಕ್ಷಣ ಕಂಡು ಬಂದ ಕೂಡಲೇ ಜನರು ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಈ ಮೂಲಕ ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳಬಾರದು ಎಂಬ ಸಲಹೆಯನ್ನು ಆರೋಗ್ಯ ಇಲಾಖೆ ನೀಡಿದೆ. ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಸಂಪರ್ಕ ಮಾಡಬೇಕು ಎಂದು ಆರೋಗ್ಯ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ