ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ..!



ಸುದ್ದಿಲೈವ್/ಕಾರ್ಗಲ್


ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎಂ. ರಾಜು ಹಾಗೂ  ಉಪಾಧ್ಯಕ್ಷರಾಗಿ ಆಯ್ಕೆಯಾದ ಜಯಲಕ್ಷ್ಮಿ ಆಯ್ಕೆಯಾಗಿದ್ದಾರೆ. 


ಈ ಹಿಂದೆ ಕಾರ್ಗಲ್ ನಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿತ್ತು. ಅವರೇ ಮತ್ತೆ ಅಧಿಕಾರ ಹಿಡಿದಿದ್ದಾರೆ. ಇಂದು ತೀರ್ಥಹಳ್ಳಿಯಲ್ಲಿ ಮತ್ತು ಕಾರ್ಗಲ್ ಪಟ್ಟಣ ಪಂಚಾಯಿತಿ ಚುನಾವಣೆ ನಡೆದಿದೆ. ಎರಡೂ ಪಂಚಾಯಿತಿಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರ ಹಿಡಿದಿದೆ. 


ಶಿಕಾರಿಪುರ ಮತ್ತು ಶಿರಾಳಕೊಪ್ಪದಲ್ಲಿ ಬಿಜೆಪಿ ಅಧಿಕಾರ ಹಿಡಿದಿತ್ತು. ಆದರೆ ಶಿರಾಳಕೊಪ್ಪದಲ್ಲಿ ಬಿಜೆಪಿಯನ್ನ ಹಿಂದಕ್ಕೆ ಸರಿಸಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ನಾಗರಾಜ್ ಗೌಡರ ಶ್ರಮದಿಂದ ಶಿರಾಳಕೊಪ್ಪದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ, ಶಿಕಾರಿಪುರದಲ್ಲಿ ಬಿಜೆಪಿ ತನ್ನ ಅಧಿಪತ್ಯವನ್ನ ಉಳಿಸಿಕೊಂಡಿದೆ. 


ಆದರೆ ಇಂದು ನಡೆದ ಎರಡೂ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ನ ಅಧಿಪತ್ಯ ಮೆರೆದಿದೆ. ಕಾರ್ಗಲ್ ನಲ್ಲಿ ಖುದ್ದು ಶಾಸಕ ಗೋಪಾಲ್ ಕೃಷ್ಣ ಬೇಳೂರು ಅಖಾಡಕ್ಕಿಳಿದು ತಮ್ಮ ಕಡೆಯವರನ್ನ ಗೆಲ್ಲಿಸಿಕೊಂಡು ಬಂದಿದ್ದಾರೆ. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close