ಶಿಮೂಲ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ-ಗೆದ್ದವರ ಪಟ್ಟಿ ಹೀಗಿದೆ

 

ಶಿಮೂಲ್ ಮುಂದೆ ಪೊಲೀಸ್ ಭದ್ರತೆ

ಸುದ್ದಿಲೈವ್/ಶಿವಮೊಗ್ಗ


ಶಿಮುಲ್ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಹಳೇ ಮುಖಗಳ ಜತೆ ಹೊಸಮುಖಗಳು ಸಹ ಈ ಬಾರಿ ಗೆಲುವು ಸಾಧಿಸಿದ್ದಾರೆ.


12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ವರು ಅವಿರೋಧ ಆಯ್ಕೆಯಾಗಿತ್ತು. ಪಟ್ಟಿ ಹೀಗಿದೆ.  ಶಿವಮೊಗ್ಗವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್ ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ತಾಲೂಕಿನಿಂದ ಸ್ಪರ್ಧಿಸಿದ್ದ ಹೆಚ್.ಬಿ.ದಿನೇಶ್ ಬಹುಮತ ಪಡೆಯುವ ಮೂಲಕ ವಿಜಯಶಾಲಿಯಾಗಿದ್ದಾರೆ.


ಸಾಗರ ವಿಭಾಗದಿಂದ ವಿದ್ಯಾಧರ್ ಅವಿರೋಧ ಆಯ್ಕೆಯಾಗಿದ್ದು, ಅವರದ್ದೆ ಸಿಂಡಿಕೇಟ್‌ನಲ್ಲಿದ್ದ ಟಿ.ಶಿವಶಂಕರಪ್ಪ, ಟಿ.ಎಸ್.ದಯಾನಂದ ಗೌಡ್ರು ಜಯಭೇರಿ ಭಾರಿಸಿದ್ದಾರೆ.


ದಾವಣಗೆರೆ ವಿಭಾಗದಿಂದ ಶಿಮುಲ್ ಮಾಜಿ ಉಪಾಧ್ಯಕ್ಷ ಹೆಚ್.ಕೆ.ಬಸಪ್ಪ, ಜಗದೀಶಪ್ಪ ಬಣಕಾರ್, ಚೇತನ್ ಎಸ್.ನಾಡಿಗೇರ್, ಬಿ.ಜಿ.ಬಸವರಾಜಪ್ಪ ಆಯ್ಕೆಯಾಗಿದ್ದಾರೆ.


ಚಿತ್ರದುರ್ಗ ವಿಭಾಗದಿಂದ ಜಿ.ಪಿ.ರೇವಣಸಿದ್ದಪ್ಪ, ಶೇಖರಪ್ಪ.ಜಿ.ಬಿ, ಸಂಜೀವಮೂರ್ತಿ, ಬಿ.ಆರ್.ರವಿಕುಮಾರ್ ಆಯ್ಕೆಯಾಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close