ಸುದ್ದಿಲೈವ್/ಶಿವಮೊಗ್ಗ
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಹೀಗಾಗಿ ಜೆಡಿಎಸ್ ಎಲ್ಲಾ ವಾರ್ಡ್‌ಗಳಲ್ಲೂ ಸ್ಪರ್ಧಿಸಲು ಸಿದ್ಧತೆ ನಡೆಸಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನ ಕುಮಾರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರಿಷ್ಠರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೆ ಅದಕ್ಕೂ ಸಿದ್ಧವಿದ್ದೇವೆ. ಮೈತ್ರಿ ಆಗದಿದ್ದರೆ ಸ್ವತಂತ್ರ ಸ್ಪರ್ಧೆ ಖಚಿತ. ಹೀಗಾಗಿ ಎಲ್ಲಾ ವಾರ್ಡ್‌ಗಳಲ್ಲಿಯೂ ಸಂಘಟನೆ ಮಾಡಲಾಗುತ್ತಿದೆ. ಈ ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಮಾಡಲಾಗುತ್ತದೆ ಎಂದರು.
ಪಾಲಿಕೆಯ ಚುನಾಯಿತ ಪ್ರತಿನಿಗಳ ಅವ ಮುಗಿದು 10 ತಿಂಗಳಾಗಿದ್ದರೂ ಕೂಡ ರಾಜ್ಯ ಸರ್ಕಾರಚುನಾವಣೆ ನಡೆಸುವ ಆಸಕ್ತಿಯನ್ನೇ ತೋರಿರಲಿಲ್ಲ. ಸುಪ್ರೀಂ ಕೋರ್ಟ್ ಹೇಳಿದ ಮೇಲೆ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸುತ್ತಿದೆ. ಯಾವುದೇ ಕಾರಣಕ್ಕೂ ಮುಂದೂಡದೆ ಸಕಾಲಕ್ಕೆ ಚುನಾವಣೆ ನಡೆಸುವಂತೆ ಆಗ್ರಹಿಸಿದರು.
ನಗರ ಜೆಡಿಎಸ್ ಅಧ್ಯಕ್ಷ ದೀಪಕ್‌ಸಿಂಗ್ ಮಾತನಾಡಿ, ಮಹಾನಗರ ಪಾಲಿಕೆ ಚುನಾವಣೆಯ ಸಿದ್ಧತೆ ನಡೆಯುತ್ತಿರುವುದರಿಂದ ಸದಸ್ಯತ್ವ ಅಭಿಯಾನಕ್ಕೆ ಆ. 29ರಂದು ಬೆಳಗ್ಗೆ 11 ಗಂಟೆಗೆ 18 ನೇ ವಾರ್ಡ್‌ನ ವಿನೋಬನಗರದ ಕಂಚಿಕಾಮಾಕ್ಷಿ ನಗರದಲ್ಲಿರುವ ವಿರಭದ್ರೇಶ್ವರ ದೇವಸ್ಥಾನದಿಂದ ಚಾಲನೆ ನೀಡಲಾಗುತ್ತದೆ ಎಂದರು.
ಪ್ರತಿ ಬೂತ್ ಮಟ್ಟದಲ್ಲೂ ಸದಸ್ಯತ್ವ ನೋಂದಣಿ ಮಾಡಲಾಗುತ್ತಿದ್ದು, ಸುಮಾರು 30 ಸಾವಿರ ಹೊಸ ಸದಸ್ಯರನ್ನುಮಾಡಲು ಉದ್ದೇಶಿಲಾಗಿದೆ. ಇದಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಅಬ್ದುಲ್ ವಾಜೀದ್, ಕೆ.ಎನ್. ರಾಮಕೃಷ್ಣ, ನರಸಿಂಹ ಗಂಧದಮನೆ, ಸಿದ್ಧಪ್ಪ, ಹೆಚ್.ಎಂ. ಸಂಗಯ್ಯ, ವಿನಯ್, ಗೋಪಿ, ಮಾಧವಮೂರ್ತಿ, ಜಯಣ್ಣ, ರಘು ಮತ್ತಿತರರು ಇದ್ದರು.