ನೆಹರೂ ಕ್ರೀಡಾಂಗಣಕ್ಕೆ ಸಚಿವ ಮಧು ಬಂಗಾರಪ್ಪ ದಿಡೀರ್ ಭೇಟಿ |
ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರು ಇಂದು ಸಂಜೆಯ ವೇಳೆಗೆ ನಗರದ ನೆಹರು ಕ್ರೀಡಾಂಗಣಕ್ಕೆ ದಿಡೀರ್ ಭೇಟಿ ನೀಡಿ ಕ್ರೀಡಾಂಗಣದ ಅವ್ಯವಸ್ಥೆಯ ಬಗ್ಗೆ ತರಬೇತಿ ಪಡೆಯುತ್ತಿರುವ ಕ್ರೀಡಾಪಟುಗಳಿಂದ ಹಾಗೂ ಸಾರ್ವಜನಿಕರಿಂದ ಸಮಸ್ಯೆಗಳನ್ನ ಆಲಿಸಿದ್ದಾರೆ.
ತರಬೇತಿದಾರರಿಂದ ಅಧಿಕಾರಿಗಳ ನಿರ್ಲಕ್ಷದ ಬಗ್ಗೆ ದೂರಿದ್ದಾರೆ. ದೂರನ್ನ ಆಲಿಸಿದ ಸಚಿವರು ತಕ್ಷಣ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರನ್ನು ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸ್ಥಳಕ್ಕೆ ತಕ್ಷಣ ಬರುವಂತೆ ತಿಳಿಸಿ ಕ್ರೀಡಾಪಟುಗಳಿಗೆ ಯಾವುದೇ ತೊಂದರೆ ಆಗದಂತೆ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಹಾಗೂ ಇನ್ನಿತರ ಮೂಲಬೂತ ಸೌಕರ್ಯಗಳ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಸಚಿವರು ಆದೇಶಿಸಿದರು, ಸ್ಮಾರ್ಟ್ ಸಿಟಿ ಯೋಜನೆ ಅಡಿ ನಿರ್ಮಾಣಗೊಂಡ ಕಟ್ಟಡ, ನೀರಿನ ಟ್ಯಾಂಕ್ ಹಾಗೂ ಇನ್ನಿತರ ಕಾಮಗಾರಿಗಳು ಕಳಪೆಯಾಗಿದ್ದು ನೀರಿನ ಟ್ಯಾಂಕ್ ಸೋರುತ್ತಿದೆ ಎಂದು ಸಾರ್ವಜನಿಕರು ಸಚಿವರಲ್ಲಿ ದೂರಿದರು.
ಇದರಿಂದ ಕುಪಿತಗೊಂಡ ಸಚಿವರು 16 ನೇ ತಾರೀಖಿನಂದು ನಡೆಯಲಿರುವ ಮಹಾನಗರ ಪಾಲಿಕೆಯ ಸಭೆಗೆ ಸಂಪೂರ್ಣ ಮಾಹಿತಿಯೊಂದಿಗೆ ಹಾಗೂ ಕಳಪೆ ಕಾಮಗಾರಿಯ ಪಟ್ಟಿಯೊಂದಿಗೆ ಸಭೆಗೆ ಬರಬೇಕೆಂದು ಅಧಿಕಾರಿಗಳಿಗೆ ಆದೇಶಿಸಿದರು, ಈ ನಡುವೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಕೇಳಿದರೆ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಾರೆ.
ಇಂದು ನೀವು ಭೇಟಿ ನೀಡುತ್ತಿದ್ದೀರಿ ಎಂದು ತಿಳಿದು ನೀರಿನ ವ್ಯವಸ್ಥೆ ಮಾಡಿದ್ದಾರೆ ಎಂದು ಸಚಿವರ ಗಮನ ಸೆಳೆಯಲಯಿತು. ಇದರಿಂದ ಆಕ್ರೋಶಗೂಂಡ ಸಚಿವರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡು ಕ್ರೀಡಾಪಟುಗಳಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಿರುವ ಹಾಗೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಒಂದೆರಡು ದಿನಗಳಲ್ಲಿ ಸಮಸ್ಯೆಗಳು ಬಗೆಹರಿಯದೆ ಇದ್ದಲ್ಲಿ ನಿಮ್ಮ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಫುಟ್ಬಾಲ್ ಆಟಗಾರರಿಗೆ ಅನುಕೂಲವಾಗುವಂತೆ ಗ್ರೀನ್ ಲಾನ್ ಅಳಓಡಿಸುವಂತೆ ಸೂಚಿಸಿ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಪಟ್ಟಿ ತಯಾರಿಸಿ ನಾಳಿನ ಸಭೆಯಲ್ಲಿ ಮಂಡಿಸುವಂತೆ ತಿಳಿಸಿದರು.
ಈ ನಡುವೆ ಫುಟ್ಬಾಲ್ ಆಟಗಾರರು ತಮಗೆ ಟೂರ್ನಮೆಂಟ್ ಗೆ ತೆರಳಲು ಅಗತ್ಯವಿರುವ ಜರ್ಕಿನ್ ಶೂ ಹಾಗೂ ಶಾರ್ಟ್ಸ್ ಗಳನ್ನು ಒದಗಿಸುವಂತೆ ಮನವಿ ಸಲ್ಲಿಸಿದಾಗ ಪೂರಕವಾಗಿ ಸ್ಪಂದಿಸಿದ ಸಚಿವರು ನನ್ನ ವೈಯಕ್ತಿಕ ಹಣದಿಂದ ತಮಗೆ ವ್ಯವಸ್ಥೆ ಮಾಡುವುದಾಗಿ ಸಚಿವರು ಭರವಸೆ ನೀಡಿದರು.