ಜಿಲ್ಲೆಯ ಪ್ರಮುಖ ಜಲಾಶಯಗಳ ನೀರಿನ ಮಟ್ಟ

 


ಸುದ್ದಿಲೈವ್/ಶಿವಮೊಗ್ಗ


ಮಳೆಯ ಆರ್ಭಟ ಶಿವಮೊಗ್ಗ ಜಿಲ್ಕೆಯಲ್ಲಿ ಪ್ರಮುಖ ನದಿಗಳ ಒಳಹರಿವು ಕಡಿಮೆಯಾಗಿದೆ. ಜಿಲ್ಲೆಯ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.


ಲಿಂಗನಮಕ್ಕಿಯ ಶರಾವತಿ ನದಿಯ ಒಳ ಹರಿವು ತಗ್ಗಿದೆ. ಇವತ್ತು 22,345 ಕ್ಯೂಸೆಕ್‌ ಒಳ ಹರಿವು ಇದೆ. 12,482 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 1816.30 ಅಡಿ ಇದೆ. ಒಟ್ಟು 151.64 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 142.65 ಟಿಎಂಸಿ ನೀರು ಸಂಗ್ರಹವಾಗಿದೆ.


ಗಾಜನೂರಿನ ತುಂಗ ಜಲಾಶಯಕ್ಕೆ ಹರಿದು ಬರುತ್ತಿದ್ದ ಒಳ ಹರಿವು ಇಳಿಕೆಯಾಗಿದೆ. ಇವತ್ತು 19,951 ಕ್ಯೂಸೆಕ್‌ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.


ಭದ್ರ ಜಲಾಶಯಕ್ಜೆ ಒಳ ಹರಿವು ಭಾರಿ ಪ್ರಮಾಣದಲ್ಲಿ ತಗ್ಗಿದೆ. ಇವತ್ತು ಜಲಾಶಯಕ್ಕೆ 7,801 ಕ್ಯೂಸೆಕ್‌ ಒಳ ಹರಿವು ಇದೆ. 7223 ಕ್ಯೂಸೆಕ್‌ ನೀರನ್ನು ಮಾತ್ರ ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 180.1 ಅಡಿಗೆ ಏರಿಕೆಯಾಗಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 64.27 ಟಿಎಂಸಿ ನೀರು ಸಂಗ್ರಹವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close