ಸುದ್ದಿಲೈವ್/ಶಿವಮೊಗ್ಗ
ಗ್ರಾಮಾಂತರ ಭಾಗದ ಕೋಟೆ ಗಂಗೂರಿನಲ್ಲಿರುವ ಖಾಲಿ ಸೈಟ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನ ಪೊಲೀಸರು ಬಂಧಿಸಿದ್ದು ಬೈಕ್ ಮತ್ತು ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ.
ನಿನ್ನೆ ಮಧ್ಯಾಹ್ನ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಗಂಗೂರು ಗ್ರಾಮದ ಖಾಲಿ ಲೇ ಔಟ್ ನ ಸಾರ್ವಜನಿಕ ರಸ್ತೆಯಲ್ಲಿ ಇಬ್ಬರು ಬೈಕ್ ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆದಿದೆ.
ಈ ಪ್ರಕರಣವನ್ನ ಬೇಧಿಸಲು ಎಸ್ಪಿ ಮಿಥುನ್ ಕುಮಾರ್ ಜಿ.ಕೆ, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ, ಮತ್ತು ಕಾರಿಯಪ್ಪ ಎ.ಜಿ. ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಸುರೇಶ್, ಎಂ ಮೇಲ್ವಿಚಾರಣೆಯಲ್ಲಿ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸತ್ಯ ನಾರಾಯಣ ಪಿ.ಐ. ಮತ್ತು ಪಿಎಸ್ಐ ಸ್ವಪ್ನಾ, ಹಾಗೂ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ 1)ಯಾಸೀನ್ ಬೇಗ್, 23 ವರ್ಷ, ಆನಂದಪುರ ಶಿವಮೊಗ್ಗ ಮತ್ತು 2) ಮುಬಾರಕ್ ಬೇಗ್, 28 ವರ್ಷ, ಆನಂದಪುರ ಶಿವಮೊಗ್ಗ ಇವರನ್ನು ದಸ್ತಗಿರಿ ಮಾಡಲಾಗಿದೆ.
ಆರೋಪಿತರಿಂದ ಅಂದಾಜು ಮೌಲ್ಯ 8,000/- ರೂ ಗಳ 582 ಗ್ರಾಂ ತೂಕದ ಒಣ ಗಾಂಜಾ ಹಾಗೂ ಅಂದಾಜು ಮೌಲ್ಯ 80,000/- ರೂಗಳ ಕೃತ್ಯಕ್ಕೆ ಬಳಸಿದ ದ್ವಿ ಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0236/2024 ಕಲಂ 20(ಬಿ)(2)(ಎ), 8(ಸಿ) NDPS ಕಾಯ್ದೆ ರೀತ್ಯ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.