ಸಿದ್ದರಾಮಯ್ಯ ಎಲ್ಲೂ ಅವರ ಪತ್ನಿ ಹೆಸರು ಹೇಳದಿರಲಿ-ಈಶ್ವರಪ್ಪ



ಸುದ್ದಿಲೈವ್/ಶಿವಮೊಗ್ಗ


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿದ ವಿಚಾರವಾಗಿ ಮಾಜಿ ಡಿಸಿಎಂ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಅವರು ಸಹ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಡ್ತಾರೆ ಅಂತಾ ನನಗೆ ವಿಶ್ವಾಸ ಇದೆ ಎಂದರು. 


ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೊನಿಗೆ ಗೌರವ ಕೊಡಬೇಕು. ನನ್ನ ಮೇಲೆ ಆಪಾದನೆ ಬಂದಾಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟೆ ಎಂದರು.


ಆದರೆ ನನಗೆ ಒಂದು ಅನುಮಾನ ಅಂದರೆ ಎಲ್ಲಿ ಅವರ ಶ್ರೀಮತಿ ಹೆಸರನ್ನ  ಎಲ್ಲಿ ಸೇರಿಸಿಬಿಡ್ತಾರೋ ಅಂತಾ ಅನುಮಾನವಿದೆ. ಪಾಪ ಅವರು ಗೌರಮ್ಮ ರೀತಿ‌ ಇದ್ದವರು ಅವರ ಮೇಲೆ ಅಂತಹ ಆಪಾದನೆ ಬರದೇ ಇರಲಿ ಅಂತಾ ಬೇಡಿಕೊಳ್ಳುತ್ತೇನೆ ಎಂದು ಹೇಳಿದರು‌ 


ಸಿದ್ದರಾಮಯ್ಯ ಕಾನೊನು ಬದ್ದವಾಗಿ ಹೋರಾಟ ಮಾಡಿ ಕ್ಲೀನ್ ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಗೆ ಬರಲಿ ಎಂದು ಆಶಿಸಿದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close