ಸುದ್ದಿಲೈವ್/ಶಿವಮೊಗ್ಗ
ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆದಿದ್ದು ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅವಕಾಶ ಕೊಟ್ಟಿರುವುದನ್ನ ಖಂಡಿಸಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಹೈಡ್ರಾಮ ನಡೆಸಿದ್ದಾರೆ.
ಯಡಿಯೂರಪ್ಪ ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನ ರಸ್ತೆ ಮದ್ಯೆ ಪ್ರತಿಭಟನಾಕಾರರನ್ನ ತಡೆದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಮುಖಂಡ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ಇಂದು ತಾಲೂಕು ಕಾಂಗ್ರೆಸ್ ಪಕ್ಷದ ಸಭೆ ಕರೆಯಲಾಗಿತ್ತು. ಸಭೆಯ ನಂತರ ಈ ಬೆಳವಣಿಗೆ ನಡೆದಿದೆ.