ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಬಿದ್ದ ಕಾರು




ಸುದ್ದಿಲೈವ್/ಶಿವಮೊಗ್ಗ


ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಆಗರದಹಳ್ಳಿ ಬಳಿ ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ.


ಅಪಘಾತದಿಂದ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ 2.30ರ ಹೊತ್ತಿಗೆ ದುರ್ಘಟನೆ ನಡೆದಿದೆ. 


ಚಾಲಕ ಕಾರ್ತಿಕ್‌ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿರೋದೇ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close