ಜಲಾಶಯಗಳ ಇಂದಿನ ನೀರಿನ ಮಟ್ಟ

 


ಸುದ್ದಿಲೈವ್/ಶಿವಮೊಗ್ಗ


ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳ ಒಳಹರಿವು ಕಡಿಮೆಯಾಗಿದೆ.


ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 22,357 ಕ್ಯೂಸೆಕ್‌ ಒಳ ಹರಿವು ಇದೆ. ಹಾಗಾಗಿ 17,301 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯ ಗರಿಷ್ಠ ನೀರಿನ ಮಟ್ಟ 1819 ಅಡಿ. ಇವತ್ತು ನೀರಿನ ಮಟ್ಟ 1816.15 ಅಡಿ ಇದೆ. ಒಟ್ಟು 151.64 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 142.12 ಟಿಎಂಸಿ ನೀರು ಸಂಗ್ರಹವಾಗಿದೆ.


ಗಾಜನೂರಿನ ತುಂಗಾ ಜಲಾಶಯಕ್ಕೆ ಇವತ್ತು 21,610 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿಯಲ್ಲಿ ನೀರಿನ ಹರಿವು ಇದ್ದು, ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಅರ್ಧ ಭಾಗ ಮಾತ್ರ ಮುಳಗಡೆಯಾಗಿದೆ.


ಭದ್ರಾ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಇವತ್ತು 7,531 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ ಇವತ್ತು 180 ಅಡಿ ಇದೆ. ಜಲಾಶಯದಲ್ಲಿ 64.22 ಟಿಎಂಸಿ ನೀರು ಸಂಗ್ರಹವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು