ಶುಕ್ರವಾರ, ಆಗಸ್ಟ್ 2, 2024

ಹವಾಮಾನ ಮುನ್ಸೂಚನೆ



ಸುದ್ದಿಲೈವ್/ಶಿವಮೊಗ್ಗ 


ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಅವಧಿಯ ಅಥವಾ ನಿರಂತರವಾಗಿ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಈಗಿನಂತೆ ಈ ಸಾಮಾನ್ಯ ಮಳೆಯು ಆಗಸ್ಟ್ 6ರ ವರೆಗೆ ಮುಂದುವರಿಯುವ ಮುನ್ಸೂಚೆನೆ ಇದೆ. 


ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಮಲೆನಾಡು ಭಾಗಗಳಲ್ಲಿಯೂ ಆಗಸ್ಟ್ 6ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ 


ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


ಈಗಿನಂತೆ ಆಗಸ್ಟ್ 7ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತಯೇ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಇದನ್ನೂ ಓದಿ-https://www.suddilive.in/2024/08/blog-post_33.html

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ