ಸುದ್ದಿಲೈವ್/ಶಿವಮೊಗ್ಗ
ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ, ಹೊರ ಹರಿವು ಹೆಚ್ಚಳವಾಗಿದೆ.
ಲಿಂಗನಮಕ್ಕಿ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಇವತ್ತು 26,162 ಕ್ಯೂಸೆಕ್ ಒಳ ಹರಿವು ಇದೆ. 39,896 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ನೀರಿನ ಮಟ್ಟ 1817.20 ಅಡಿಗೆ ತಲುಪಿದೆ. ಪ್ರಸ್ತುತ ಜಲಾಶಯದಲ್ಲಿ 145.47 ಟಿಎಂಸಿ ನೀರು ಇದೆ.
ತುಂಗಾ ಜಲಾಶಯದ ಒಳ ಹರಿವು ಕೂಡ ಹೆಚ್ಚಳವಾಗಿದೆ. ಇವತ್ತು 14,724 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಮಟ್ಟ ಪುನಃ ಏರಿಕೆಯಾಗಿದೆ.
ಭದ್ರಾ ಜಲಾಶಯದ ಒಳ ಹರಿವು ಕೂಡ ತುಸು ಏರಿಕೆಯಾಗಿದೆ. ಇವತ್ತು 8571 ಕ್ಯೂಸೆಕ್ ಒಳ ಹರಿವು ಇದೆ. 3942 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 181.2 ಅಡಿ ಇದೆ. ಪ್ರಸ್ತುತ ಜಲಾಶಯದಲ್ಲಿ 65.57 ಟಿಎಂಸಿ ನೀರು ಸಂಗ್ರಹವಾಗಿದೆ.