ಮತ್ತಿಕೈಯಲ್ಲಿ ಹೃದಯವಿದ್ರಾವಕ ಘಟನೆ | ಚಂಪಕಾಪುರದಲ್ಲಿ ಸ್ಮಶಾನ ಮೌನ




ಸುದ್ದಿಲೈವ್/ಹೊಸನಗರ


ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಮಹಿಖೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ.


ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳು. ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ. ನಗರ ಠಾಣೆ ಪಿಎಸ್ಐ ರಮೇಶ್ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.


ಈಗಾಗಲೇ ಮೃತದೇಹವನ್ನು ಬಾವಿಯಿಂದ ಎತ್ತಲಾಗಿದ್ದು, ನಗರ ಆಸ್ಪತ್ರೆಯ ಶವಾಗಾರಕ್ಕೆ ತಂದು ಮರಣೋತ್ತರ ಪರೀಕ್ಷೆ ನಡೆಸಲು ಸಿದ್ದತೆ ನಡೆಸಲಾಗಿದೆ. ಇಡೀ ಗ್ರಾಮದಲ್ಲಿ ಸ್ಮಶಾನಮೌನ ಆವರಿಸಿದೆ. ಅದರಲ್ಲು ಪುಟ್ಟ ಮಕ್ಕಳು ಮೃತಪಟ್ಟ ಧಾರುಣ ಸ್ಥಿತಿ ಕರುಳು ಕಿವುಚುವಂತಾಗಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕಿದೆ ಎಂಬ ಒತ್ತಾಯ ಗ್ರಾಮಸ್ಥರದ್ದಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close