ಸುದ್ದಿಲೈವ್ /ಶಿವಮೊಗ್ಗ
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಬಾಂಗ್ಲಾದೇಶ ರೀತಿಯಲ್ಲಿ ಗಲಭೆ ಆಗುತ್ತದೆ ಎಂಬ ಹೇಳಿಕೆ ವಿರುದ್ಧ ಬಿಜೆಪಿ ಜಿಲ್ಲಾ ಯುವಮೋರ್ಚಾ ಜಿಲ್ಲಾರಕ್ಷಣಾಧಿಕಾರಿ ಮತ್ತು ದೊಡ್ಡಪೇಟೆ ಪೊಲೀಸ್ ಠಾಣೆ ಪಿಐಗೆ ಮನವಿ ಸಲ್ಲಿಸಿದೆ.
ಶಿವಮೊಗ್ಗದಲ್ಲಿ ಐವನ್ ಡಿಸೋಜ ವಿರುದ್ಧ ದೂರು . ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಗೆ ದೂರು ನೀಡಲಾಗಿದ್ದು, ದೂರು ನೀಡಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಐವತ್ತಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ಎಸ್ಪಿ ಕಚೇರಿಗೆ ಭೇಟಿ ನೀಡಿ ದೂರು ನೀಡಲಾಯಿತು.ಹಾಗೆ ದೊಡ್ಡಪೇಟೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲಾಯಿತು.
ಬಾಂಗ್ಲಾ ದೇಶದಲ್ಲಿ ಆದ ಹಿಂಸಾಚಾರದ ಸ್ವರೂಪ ಇಲ್ಲೂ ಆಗುತ್ತದೆ ಎಂಬ ಎಂಎಲ್ ಸಿ ಐವಾನ್ ಡಿಸೋಜ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಯುವ ಮೋರ್ಚಾ ಕಾರ್ಯಕರ್ತರು, ಕೂಡಲೇ ಈ ಬಗ್ಗೆ ಪೊಲೀಸರು ಎಫ್ ಐ ಆರ್ ದಾಖಲು ಮಾಡಿಕೊಂಡು ಐವಾನ್ ಡಿಸೋಜ ಬಂಧಿಸಬೇಕೆಂದು ಒತ್ತಾಯಿಸಿದರು.
ಇದರ ಜೊತೆ ಸಿಎಂ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಯಿತು. ಈ ವೇಳೆ ಮಾತನಾಡಿದ ಹರಿಕೃಷ್ಣ ಕೈಯಲ್ಲಿ ಸಂವಿಧಾನ ಹಿಡಿದು ಪರಿಪಾಲಕನಂತೆ ಬಿಂಬಿಸಿಕೊಳ್ಳುವ ರಾಹುಲ್ ಗಾಂಧಿ ಐವನ್ ಹೇಳಿಕೆ ಸಂವಿಧಾನ ಬದ್ದವಾಗಿದೆಯಾ ಅಥವಾ ಇಲ್ಲವಾ ಎಂಬುದನ್ನ ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು.