ರಾಜ್ಯಪಾಲರ ಅನುಮತಿ ಖಂಡಿಸಿ ಪ್ರತಿಭಟನೆ-ರಸ್ತೆ ಸಂಚಾರಕ್ಕೆ ಅಡ್ಡಿ

 



ಸುದ್ದಿಲೈವ್/ಶಿವಮೊಗ್ಗ


ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.


ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ, ಕಾನೂನು ಗಾಳಿಗೆ ತೂರಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕಾನೂನು ಬಾಹಿರ ನಡೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.


ಗೋಪಿವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಟಯರ್ ಗೆ ಬೆಂಕಿ ಹಚ್ಚಲಾಯುತು. ಕಾರಣ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ನೆಹರೂ ರಸ್ತೆ, ಬಾಲರಾಜ್ ಅರಸ್ ರಸ್ತೆ, ಕಸ್ತೂರ ಬಾ, ದುರ್ಗಿಗುಡಿ ರಸ್ತೆ, ಜ್ಯೂವೆಲ್ ರಾಕ್ ರಸ್ತೆಗಳಲ್ಲಿ ವಾಹನಗಳು ಜ್ಯಾಮ್ ಆಗಿವೆ. 


ಪಕ್ಷದ ಬಾವುಟ ಹಿಡಿದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ರಾಜ್ಯಪಾಲರನ್ನ ಬಿಜೆಪಿ ಪಕ್ಷದ ಕೈಗೊಂಬೆ ಎಂದು ಆರೋಪಿಸಿದರು. ಪಕ್ಷದ ಜಿಲ್ಲಾಧ್ಯಕ್ಷ, ಮುಖಂಡರಾದ ಎನ್ ರಮೇಶ್, ಪಿ ಶೇಷಾದ್ರಿ, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವುಕುಮಾರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶ, ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಗಿರೀಶ್, ಶರತ್ ಮರಿಯಪ್ಪ, ಶಾಮೀರ್ ಖಾನ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು‌.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close