ಸೆ.13 ರಂದು ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಹಾಗೂ ಧರ್ಮಸಭೆ



ಸುದ್ದಿಲೈವ್/ಶಿವಮೊಗ್ಗ


ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಶಿವಮೊಗ್ಗ ಜಿಲ್ಲೆಯಿಂದ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಹಾಗೂ ಧರ್ಮಸಭೆಯು ನಗರದ ವೀರಶೈವ ಕಲ್ಯಾಣ ಮಂಟಪದ ಹಿಂಭಾಗದ ಚೌಕಿ ಮಠದಲ್ಲಿ ನಡೆಯಲಿದೆ 


ಈ ಕುರಿತು ಸುದ್ದಿಗೋಷ್ಠಿ ನಡೆಸಿದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಜಿಲ್ಲಾಧ್ಯಕ್ಷ ಶಿವರಾಜ್ ಜಯಂತ್ಯೋತ್ಸವ ಮತ್ತು ಧರ್ಮ ಸಭೆಯು ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಹಾಗೂ ಬೆಕ್ಕಿನಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ನಡೆಯಲಿದೆ ಎಂದರು. 


11-30 ಕ್ಕೆ ನಡೆಯುವ ಧಾರ್ಮಿಕ ಸಭೆಯನ್ನ ನಡೆಸಲಿದ್ದಾರೆ.  ಸಂಸದ ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ,  ಸಂಸದ ರಾಘವೇಂದ್ರ ಮಾಜಿ ಎಂಎಲ್‌ಸಿ ರುದ್ರೇಗೌಡ, ಶಾಸಕರಾದ ಚೆನ್ನಬಸಪ್ಪ, ಬಿಕೆ ಸಂಗಮೇಶ್ವರ್, ಶಾಂತನಗೌಡ್ರು, ಮಾಜಿ ಶಾಸಕ ರೇಣುಕಾಚಾರ್ಯ, ವೀರಶೈವ ಲಿಂಗಾಯಿತ ಸಂಘಟನಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಶಂಕಣವಾಡಿ, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಮಾಜಿ ಶಾಸಕ ಚಂದ್ರಶೇಖರಪ್ಪ, ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮೊದಲಾದವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.‌


ಕಾರ್ಯಕ್ರಮದ ಉಸ್ತುವಾರಿಯನ್ನ ಎಂಎಲ್‌ಸಿ ಡಾ.ಧನಂಜಯ ಸರ್ಜಿ ವಹಿಸಲಿದ್ದು, ಮಾಜಿ ಸೂಡಾ ಅಧ್ಯಕ್ಷ ಎಸ್ ಎಸ್ ಜ್ಯೋತಿ ಪ್ರಕಾಶ್, ಪ್ರಾಸ್ತವಿಕ ನುಡಿ ಆಡಲಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close