30 ಸಾವಿರ ಸದಸ್ಯತ್ವದ ಗುರಿ-ಸಂಜಯ್ ಕಶ್ಯಪ್



ಸುದ್ದಿಲೈವ್/ಶಿವಮೊಗ್ಗ


ಜೆಡಿಎಸ್ ನಗರ ಘಟಕದ ವತಿಯಿಂದ ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸಲಾಗಿದೆ ಎಂದು ನಗರ ಯುವ ಜೆಡಿಎಸ್ ಅಧ್ಯಕ್ಷ ಸಂಜಯ್ ಎಸ್. ಕಶ್ಯಪ್ ಹೇಳಿದರು.


ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಮಾರ್ಗದರ್ಶನದಂತೆ ಇಡೀ ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಶಿವಮೊಗ್ಗ ನಗರದಲ್ಲಿ ಕೂಡ ಅಭಯಾನ ಈಗಾಗಲೇ ಆರಂಭವಾಗಿದೆ. ನಗರ ಅಧ್ಯಕ್ಷ ದೀಪಕ್ ಸಿಂಗ್ ಅವರ ನೇತೃತ್ವದಲ್ಲಿ ಈಗಾಗಲೇ ಎಲ್ಲಾ 32 ವಾರ್ಡ್‌ಗಳಲ್ಲಿಯೂ ಸಮಿತಿಯನ್ನು ರಚಿಸಲಾಗಿದೆ. ವಾರ್ಡ್ ಅಧ್ಯಕ್ಷರ ನೇಮಕ ಮಾಡಲಾಗಿದೆ ಎಂದರು.


ನಗರದಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು. ಸುಮಾರು 288 ಬೂತ್ ಗಳಿದ್ದು, 30 ಸಾವಿರ ಸದಸ್ಯರನ್ನು ನೇಮಕ ಮಾಡಿಕೊಳ್ಳುವ ಗುರಿ ಹೊಂದಲಾಗಿದೆ. ಈಗಾಗಲೇ ಈ ಬಗ್ಗೆ ಅಭಿಯಾನ ಆರಂಭವಾಗಿದೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ನಿಹಾಲ್ ಖಾನ್, ಆದಿತ್ಯನ್ ಮೊದಲಿಯಾರ್, ಕೃಷ್ಣ, ಅರುಣ್, ವಸಂತ್, ಸೂರಜ್ ಇದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close