ಸುದ್ದಿಲೈವ್/ಶಿವಮೊಗ್ಗ
ಗೌರವಾನ್ವಿತ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 74ನೇ ಜನ್ಮದಿಂದ ಅಂಗವಾಗಿ ಶಿವಮೊಗ್ಗ ಗ್ರಾಮಾಂತರ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಆಯನೂರಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಸತತ 66 ನೆಯ ಬಾರಿಗೆ ರಕ್ತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ಈ ವೇಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಶ್ರೀ ಎಸ್.ದತ್ತಾತ್ರಿ, ಮಾಜಿ ಶಾಸಕರಾದ ಶ್ರೀ ಕೆ.ಬಿ ಅಶೋಕ್ ನಾಯ್ಕ್, ಪ್ರಮುಖರಾದ ಶ್ರೀ ತಮ್ಮಡಿಹಳ್ಳಿ ನಾಗರಾಜ್, ವಿರುಪಾಕ್ಷಪ್ಪ, ಶಿವಮೊಗ್ಗ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಗಳಾದ ಅನಿಲ್ ಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು.