ಸಾಗರ ಖಾಸಗಿ ಕಾಲೇಜಿನ ಉಪನ್ಯಾಸಕ ಬಂಧನ



ಸುದ್ದಿಲೈವ್/ಶಿವಮೊಗ್ಗ


ಮದುವೆ ಆಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಪುನೀತ್ ಬಂಧಿತ ಉಪನ್ಯಾಸಕ. ಸಾಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ಉಪನ್ಯಾಸಕ‌ನಾಗಿರುವ ಪುನೀತ್ ನನ್ನು ಶಿವಮೊಗ್ಗದ ಖಾಸಗಿ ಕಾಲೇಜಿನ 19 ವರ್ಷದ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪದಲ್ಲಿ ಬಂಧಿಸಲಾಗಿದೆ. 


ಪಠ್ಯದಲ್ಲಿ ಅರ್ಥವಾಗದ ವಿಷಯಗಳನ್ನು ಹೇಳಿಕೊಡುವುದಾಗಿ ಫುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.


ಈ ಬಗ್ಗೆ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆರೋಪಿ ಪುನೀತ್ ನನ್ನು ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close