Girl in a jacket

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ



ಸುದ್ದಿಲೈವ್/ಶಿವಮೊಗ್ಗ, 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಅ.01 ಮತ್ತು 02 ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಸ ಮಾಡಲಿದ್ದಾರೆ.

ಅ.01 ರಂದು ಬೆ.9.00ಕ್ಕೆ ಸೊರಬಕ್ಕೆ ಆಗಮಿಸಲಿರುವ ಸಚಿವರು ಅನವಟ್ಟಿ ಯಲ್ಲಿ 17 ವರ್ಷದ ಒಳಗಿನ ಪ್ರೌಢಶಾಲಾ ಬಾಲಕ/ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಹಗೂ ಬಾಲ್‌ಬ್ಯಾಡ್ಮಿಂಟನ್ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  

ಬೆ. 10.00 ಕ್ಕೆ ಸೊರಬದ ಡಾ|| ರಾಜ್ ಕಲಾಕ್ಷೇತ್ರದಲ್ಲಿ ನಿವೃತ್ತ ನೌಕರರ ಪ್ರಪ್ರಥಮ ಸಮ್ಮೇಳನ-2024-25 ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ 75 ವರ್ಷ ಮೇಲ್ಪಟ್ಟ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.  ಮ.12.00ಕ್ಕೆ ಸಾಗರದ ಗಾಂಧಿ ಮೈದಾನ, ನಗರಸಭೆ ಆವರಣದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 06 ದಿನಗಳ ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಜಿಲ್ಲಾಮಟ್ಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  

ಸಂಜೆ 4.00ಕ್ಕೆ ಶಿವಮೊಗ್ಗದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರೊಂದಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.  

ಅ. 02 ರಂದು ಶಿವಮೊಗ್ಗ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು