ಸುದ್ದಿಲೈವ್/ಶಿವಮೊಗ್ಗ
ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟಿಸಲಾಗಿದೆ. ಪ್ರಾಥಮಿಕ ಶಾಲೆ ವಿಭಾಗದಲ್ಲಿ 20 ಶಿಕ್ಷಕರು, ಪ್ರೌಢಶಾಲೆ ವಿಭಾಗದಲ್ಲಿ 11 ಶಿಕ್ಷಕರು ಮತ್ತು 8 ಜನ ಉಪನ್ಯಾಸಕರಿಗೆ ಅತ್ಯುತ್ತಮ ಪ್ರಶಸ್ತಿ ಲಭಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಮತ್ತು ಓರ್ವ ಉಪನ್ಯಾಸಕರಿಗೆ ಪ್ರಶಸ್ತಿ ಲಭಿಸಿದೆ.
ಸೆ.5ರಂದು ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಶಿಕ್ಷಕಿಯರಿಗೆ ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಹಾಂತಯ್ಯ ಎಸ್.ಹೊಸಮಠ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ ಶಾಲೆ ವಿಭಾಗದಲ್ಲಿ ಶಿವಮೊಗ್ಗದ ಗುತ್ಯಪ್ಪ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭಾಗೀರಥಿ.ಎಂ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರೌಢಶಾಲೆ ವಿಭಾಗದಲ್ಲಿ ತೀರ್ಥಹಳ್ಳಿ ತಾಲೂಕು ಹೊಸೂರು ಗುಡ್ಡೇಕೇರಿಯ ಸರ್ಕಾರಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ವೀರೇಶ್.ಟಿ ಅವರಿಗೆ ಪ್ರಶಸ್ತಿ ಲಭಿಸಿದೆ.
ರಿಪ್ಪನ್ಬಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗಣಿತ ಉಪನ್ಯಾಸಕ ವಾಸುದೇವ ಕೆ.ಹೆಚ್ ಅತ್ಯುನ್ನತ ಉಪನ್ಯಾಸಕರಿಗೆ ಪ್ರಶಸ್ತಿ ಲಭಿಸಿದೆ.