ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ಇಸ್ಪೀಟ್ ಅಡಗಡೆಯ ಮೇಲೆ ಪೊಲೀಸರ ದಾಳಿ


ಸುದ್ದಿಲೈವ್/ತೀರ್ಥಹಳ್ಳಿ/ಹೊಸನಗರ

ಹೊಸನಗರ ಮತ್ತು ತೀರ್ಥಹಳ್ಳಿ ಭಾಗದಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸ್ ರೈಡ್ ನಡೆದಿದೆ. ತೀರ್ಥಹಳ್ಳಿಯಲ್ಲಿ 7 ಜನರ ವಿರುದ್ಧ ದೂರು ದಾಖಲಾದರೆ ಹೊಸನಗರದಲ್ಲಿ 11 ಜನರ ವಿರುದ್ಧ ದೂರು ದಾಖಲಾಗಿದೆ. 

ಸೆ.27ರಂದು ರಾತ್ರಿ  ತೀರ್ಥಹಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯ ಮುಳಬಾಗಿಲು ಗ್ರಾಮದ ಸರ್ಕಾರಿ ಪ್ಲಾಂಟೇಶನ್ ನಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. 

07 ಜನ ಆರೋಪಿತರನ್ನು ಬಂಧಿಸಿ ಜೂಜಾಟದಲ್ಲಿ ಪಣವಾಗಿಟ್ಟಿದ್ದ ಒಟ್ಟು 13,000/- ರೂ ನಗದು ಹಣ ಮತ್ತು ಇಸ್ಪೀಟ್ ಎಲೆಗಳನ್ನು ಅಮಾನತುಪಡಿಸಿಕೊಳ್ಳಲಾಗಿದೆ.  ಆರೋಪಿತರ ವಿರುದ್ದ ತೀರ್ಥಹಳ್ಳಿ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ನಿನ್ನೆ ಬೆಳಗ್ಗೆ  ಹೊಸನಗರ  ಪೊಲೀಸ್ ಠಾಣಾ ವ್ಯಾಪ್ತಿಯ ಮಾರುತಿಪುರ ಗ್ರಾಮದ  ಹಳೆ ಬಾಣಿಗ ರಸ್ತೆಯ ಹತ್ತಿರ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆದಿದೆ.  ಇಸ್ಪೀಟ್ ಜೂಜಾಟ ಆಡುತ್ತಿದ್ದ 11 ಜನ ಆರೋಪಿತರನ್ನು  ದಸ್ತಗಿರಿ ಮಾಡಿ ಜೂಜಾಟದಲ್ಲಿ ಪಣವಾಗಿಟ್ಟಿದ್ದ ಒಟ್ಟು 17,640/- ರೂ ನಗದು ಹಣ  ಮತ್ತು ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ.  ಆರೋಪಿತರ ವಿರುದ್ದ ಹೊಸನಗರ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close