ವಕ್ಫ್ ತಿದ್ದಪಡಿಗೆ ಎಸ್‌ಡಿಪಿಐ ಜಿಲ್ಕಾಧಿಕಾರಿ ಕಚೇರಿ ಎದುರು ಪ್ರತಿಭಟನೆ

 



ಸುದ್ದಿಲೈವ್/ಶಿವಮೊಗ್ಗ


ವಕ್ಸ್ ಬಿಲ್ -2024 ಜಂಟಿ ಪಾರ್ಲಿಮೆಂಟ್ ಸಮಿತಿ ಜಾರಿಗೆ ತರುತ್ತಿರುವುದನ್ನ ವಿರೋದಿಸಿ ಇಂದು ಎಸ್‌ಡಿಪಿಐ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದೆ. 


ವಕ್ಸ್ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಸ್ ಸುಧಾರಣೆಗಳ ಹೆಸರಿನಲ್ಲಿ ಇತ್ತೀಚೆಗೆ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಒಕ್ಕೂಟದ ಸರ್ಕಾರ ವಕ್ಸ್ ಬಿಲ್ 2024 ತಂದಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿರುತ್ತದೆ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ ಇರುವ ವಕ್ಸ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಹಿಡನ್ ಅಜೆಂಡವಾಗಿರುತ್ತದೆ ಎಂದು ಆರೋಪಿಸಿದೆ.  


ಹಾಲಿಯಿರುವ ವಕ್ಪ್ ಕಾಯ್ದೆಗೆ ಸರಿಸುಮಾರು 40 ತಿದ್ದುಪಡಿಗಳನ್ನು ಮಾಡುವ ಮೂಲಕ ಇಡೀ ವಕ್ಸ್ ಕಾಯ್ದೆಯನ್ನೇ ನಾಶಗೊಳಿಸಲು ಈ ವಕ್ಫ್ ಬಿಲ್ - 2024 ತರಲಾಗುತ್ತಿದೆ. ಇದು ಜಾತ್ಯಾತೀತ ಮೌಲ್ಯಗಳ ವಿರುದ್ಧವಾಗಿದೆ ಹಾಗೂ ತಾರತಾಮ್ಯಗಳೊಂದಿಗೆ ಕೂಡಿದೆ. ಅದುದರಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಜಂಟಿ ಸಂಸದೀಯ ಸಮಿತಿಗೆ ನವದೆಹಲಿಗೆ ಮನವಿ ಸಲ್ಲಿಸುವ  ಮೂಲಕ ಅಕ್ಷೆಪಿಸಿದೆ. 


ವಕ್ಷ ತಿದ್ದುಪಡಿ ಬಿಲ್‌ಗೆ ಸಂಬಂಧಿಸಿದಂತೆ ಈ ಕೆಳಗಿನ ಆಕ್ಷೇಪಣೆಗಳನ್ನು ಸಲ್ಲಿಸಲಾಗಿದೆ. 1) ನ್ಯಾಯ ಮಂಡಳಿಯು ನ್ಯಾಯಾಂಗ ವ್ಯವಸ್ಥೆಯ ಸಂಸ್ಥೆಯಾಗಿದ್ದು, ಸದರಿ ವಕ್ಷ ಬಿಲ್ ಮಸೂದೆಯು ನ್ಯಾಯಾಂಗ ಮಂಡಳಿಯ ಅಧಿಕಾರವನ್ನು ಕಸಿದುಕೊಳ್ಳುತ್ತದೆ. ಇದು ಸಾಮಾನ್ಯ ಕಾನೂನು ನಿಯಮಕ್ಕೆ ವಿರುದ್ಧವಾಗಿದೆ ಮತ್ತು ಕಾನೂನು ಉಲ್ಲಂಘನೆಯಾಗಿದೆ.


2) ಹಿಂದೂಗಳಲ್ಲದ ಬೌದ್ಧರು, ಜೈನರು ಮತ್ತು ಸಿಬ್ಬರು ಇವರಿಗೂ ಸಹ ದೇವಸ್ಥಾನದ ಆಡಳಿತದ ಸದಸ್ಯತ್ವವನ್ನು ನಿಷೇಧಿಸಿರುವುದರಿಂದ ಹಿಂದೂಗಳಿಗೆ ವಕ್ಸ್ ಮಂಡಳಿಯ ಸದಸ್ಯರಾಗಿ ಜವಾಬ್ದಾರಿ ನೀಡುವುದು ಸಂಪೂರ್ಣ ತಾರತಮ್ಯದಿಂದ ಕೂಡಿದೆ.


3) ವಕ್ಸ್ ಅಧಿಕಾರ ವ್ಯಾಪ್ತಿಯಿಂದ ಶತ್ರುಗಳ ಆಸ್ತಿಗಳೆಂದು ಪರಿಗಣಿಸಿ ಸದರಿ ಆಸ್ತಿಗಳನ್ನು ಎಕ್ಸ್ ನಿಯಂತ್ರಣದಿಂದ ಹೊರಗಿಡುವುದು ದೊಡ್ಡ ಪ್ರಮಾಣದ ಹಾನಿಯನ್ನು ಉಂಟುಮಾಡುತ್ತದೆ.


4) ಭೂ ಪರಿವರ್ತನೆಗೆ ನೀಡಿರುವ 90 ದಿನಗಳ ಅವಧಿಯನ್ನು ಎಕ್ ಭೂಮಿಯ ಆಗಾಧತೆಯ ದೃಷ್ಟಿಕೋನದಲ್ಲಿ ಹೇಳುವುದಾದರೆ, ಅದು ತೀರಾ ಸಾಕಾಗದು. ನಾವು ಆರಿಕೆ ಮಾಡುವುದೇನೆಂದರೆ, ಎಣ್ಣೆ ಕಾನೂನಿನ ಉದ್ದೇಶವು ವಕ್ಸ್ ಭೂಮಿಯ ರಕ್ಷಣೆ ಎಂದಾಗಿರುವಾಗ, ಈ ದುರುದ್ದೇಶಿತ ಮಸೂದೆಯು ಮುಸಲ್ಮಾನರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಸಾಲು ಸಾಲು ಕಾನೂನುಗಳ ಸಂದೇಶವನ್ನು ಸಾರುತ್ತಿದೆ. ಮುಸಲ್ಮಾನರು ಕೆಳ ದರ್ಜೆಯವರು ಎಂದು ಬಿಂಬಿಸಿ, ಅವರ ಮೇಲೆ ವಿವಿಧ ಆಸಮಾನ ಕಾನೂನುಗಳನ್ನು ಹೇರಲಾಗುತ್ತಿದೆ. ಈ ಬಗ್ಗೆ ಜಂಟಿ ಸಮಿತಿಯು ಸಕಾಲಿಕ ಮುಂಜಾಗರೂಕತೆಯನ್ನು ಪಾಲಿಸಿ, ಸಮಾಜದ ಹಾಗೂ ದೇಶದ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗಿ ಕೇಳಿಕೊಳ್ಳುತ್ತಿದ್ದೇವೆ.


ಪ್ರತಿಭಟನೆಯಲ್ಲಿ ಎಸ್‌ಡಿಪಿಐನ ಇಮ್ರಾನ್ ಅಹಮದ್, ಇನಾಫ್ ಅಹಮದ್, ಫೈರೋಜ್, ಸಲೀಂ, ರಹೀಮ್, ರಜಾಕ್ ಮೊದಲಾದವರು ಉಪಸ್ಥಿತರಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು