ಎಕ್ಸ್‌ಪ್ರೆಸ್ ರೈಲಿನ ವೇಗದ ಹೆಚ್ಚಳಕ್ಕೆ ಚಿಂತನೆ-ಸಚಿವ ಸೋಮಣ್ಣ


ಸುದ್ದಿಲೈವ್/ಶಿವಮೊಗ್ಗ

ಜಿಲ್ಲೆಗೆ ವಂದೇ ಭಾರತ್ ರೈಲು ತರಬೇಕು ಎನ್ನುವ ಸಂಸದ ಬಿ.ವೈ.ರಾಘವೇಂದ್ರ ಅವರ ಕನಸು ನನಸಾಗಲಿದೆ. ಈ ಕನಸಿಗೆ ಶಕ್ತಿ ತುಂಬುವ ಕಾರ್ಯ ಮಾಡುತ್ತೇನೆ. ಶಿವಮೊಗ್ಗ- ಶಿಕಾರಿಪುರ ಮಾರ್ಗದ ರೈಲ್ವೆ ಕಾಮಗಾರಿ ಕೂಡ ಪ್ರಗತಿಯಲ್ಲಿದೆ. ಅದೇ ರೀತಿ, ಬಿರೂರು- ಶಿವಮೊಗ್ಗ ಡಬ್ಲಿಂಗ್ ಲೈನ್ ಪ್ರಗತಿಯಲ್ಲಿದೆ. ಇದಕ್ಕೆ ಗುತ್ತಿಗೆ ಸಹ ಕರೆಯಲಾಗಿದೆ. ಅಮೃತ ಭಾರತ್ ಯೋಜನೆಯಡಿ ಅನೇಕ ಅಭಿವೃದ್ಧಿ ಕಾರ್ಯ ನಡೆಯುತ್ತಿವೆ. ಇಲ್ಲಿನ ಹಾರನಹಳ್ಳಿ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ೧.೮ ಕೋಟಿ ಬಿಡುಗಡೆ ಆಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.

ರಾಜ್ಯದಲ್ಲಿ ಎಕ್ಸ್ ಪ್ರೆಸ್ ರೈಲುಗಳಿಗೆ ಗಂಟೆಗೆ ೧೧೦ ಕಿಮೀ ವೇಗದ ಮಿತಿ ಇದೆ. ಇದನ್ನು ಗಂಟೆಗೆ ೧೩೫ ಕಿಮೀ ಮಿತಿಗೆ ಏರಿಸುವ ಪ್ರಯೋಗಕ್ಕೆ ರೈಲ್ವೆ ಇಲಾಖೆ ಮಾಡುತ್ತಿದೆ. ರಾಜ್ಯಕ್ಕೆ ರೈಲ್ವೆ ಯೋಜನೆಗಳನ್ನು ತರುವ ವಿಚಾರದಲ್ಲಿ ಯಾವುದೇ ರಾಜಕೀಯ ಸಲ್ಲದು ಎಂದ ಅವರು, ಅಭಿವೃದ್ಧಿ ಕಾರ್ಯಗಳಿಗೆ ಸಾರ್ವಜನಿಕರಿಗೆ ಸಹಕರಿಸಬೇಕು ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close