ಮಿಲಾದ್ ಮೆರವಣಿಗೆಗೆ ಮಾರ್ಗ ಬದಲಾವಣೆ, ಪಾರ್ಕಿಂಗ್ ವ್ಯವಸ್ಥೆ




ಸುದ್ದಿಲೈವ್/ಶಿವಮೊಗ್ಗ


ಸೆ.22 ರಂದು ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಭಾಗಗಳಲ್ಲಿ ಮೆರವಣಿಗೆ ಸಾಗುವುದರಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಮತ್ತು ವಾಹನಗಳ ಮಾರ್ಗ ಬದಲಾವಣೆ ಹಾಗೂ ನಿಲುಗಡೆಗೆ ತಾತ್ಕಾಲಿಕ ಅಧಿಸೂಚನೆಯನ್ನ ಜಿಲ್ಲಾಡಳಿತ ಹೊರಡಿಸಿದೆ. 


ಸೆ.22 ರಂದು ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಸಲಿದ್ದು, ಶಿವಮೊಗ್ಗ ನಗರದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್ 2ನೇ ಕ್ರಾಸ್, ನಾಗಪ್ಪನ ಕೇರಿ,ಲಷ್ಕರ್ ಮೊಹಲ್ಲಾ ಮುಖ್ಯ ರಸ್ತೆಯ -ಓಲ್ಡ್ ಬಾರ್ ಲೈನ್ ರಸ್ತೆ - ಪೆನ್ಷನ್ ಮೊಹಲ್ಲಾ-ಬಾಲ್ ರಾಜ್ ಅರಸ್ ರಸ್ತೆ-ಮಹಾವೀರ ಸರ್ಕಲ್- ಗೋಪಿ ಸರ್ಕಲ್- ನೆಹರು ರಸ್ತೆ- ಅಮೀರ್ ಅಹ್ಮದ್ ಸರ್ಕಲ್ ಮಾರ್ಗವಾಗಿ ಬಿಹೆಚ್ ರಸ್ತೆ -ಅಶೋಕ ಸರ್ಕಲ್-ಎನ್ ಟಿ ರಸ್ತೆ -ಗುರುದೇವ ರಸ್ತೆ -ರ್ಕ್ಲಾಕ್ ಪೇಟೆ, ನೂರಾನಿ ಮಸೀದಿ ಕೆಆರ್ ಪುರಂ ರಸ್ತೆ ಮಾರ್ಗವಾಗಿ ಅಮೀರ್ ಅಹಮ್ಮದ್ ಸರ್ಕಲ್ ತಲುಪಲಿದೆ. 


ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ನಗರದ ಕೆಲ ಸ್ಥಳಗಳಲ್ಲಿ ವಾಹನ ಸಂಚಾರ ನಿಷೇಧ,ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಡಳಿತ  ತಾತ್ಕಾಲಿಕವಾಗಿ ಆದೇಶಿಸಿದೆ. 


ಸಾರ್ವಜನಿಕ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಗುರುದತ್ತ ಹೆಗಡೆ, ಭಾ.ಆ.ಸೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮೋಟಾರು ವಾಹನ ಕಾಯ್ದೆ 1988 ಕಲಂ 115 & 117 ರ ಅನ್ವಯ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳ ಅಡಿಯಲ್ಲಿ ಮಾರ್ಗ‌ ಬದಲಾವಣೆಗೆ ಆದೇಶಿಸಿದ್ದಾರೆ.


ವಾಹನಗಳ ಮಾರ್ಗ ಬದಲಾವಣೆಯು ಸೆ.22 ರಂದು ಬೆಳಿಗ್ಗೆ 6-00 ಗಂಟೆಯಿಂದ ರಾತ್ರಿ 08-00 ಗಂಟೆವರೆಗೆ ಈ ಕೆಳ ಕಂಡ ಮಾರ್ಗಕ್ಕೆ ಬದಲೀ ಮಾರ್ಗ ಸೂಚಿಸಲಾಗಿದೆ.‌


1. ಭದ್ರಾವತಿ ಬೆಂಗಳೂರು ಎನ್ ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ ಗಳು ಎಂ.ಆರ್ .ಎಸ್ ಸರ್ಕಲ್ ನಿಂದ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.


2. ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ ಗಳು ಹೊಳೆಹೊನ್ನೂರು ಸರ್ಕಲ್,ಎಂ.ಆರ್.ಎಸ್.ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.


3. ಹೊನ್ನಾಳಿ,ದಾವಣಗೆರೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಬಸ್ ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್ ಶಂಕರ ಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂ. ಆರ್ ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.


4. ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಹರಿಹರ,ದಾವಣಗೆರೆಗೆ ಹೋಗುವ ಎಲ್ಲಾ ಬಸ್ ಗಳು ಮತ್ತು ಭಾರಿ ಸರಕು ವಾಹನಗಳು ಬೈಪಾಸ್ ಮುಖಾಂತರವಾಗಿ ಎಂಆರ್ ಎಸ್ ಸರ್ಕಲ್, ವಿದ್ಯಾನಗರ ಶಂಕರಮಠ ಸರ್ಕಲ್, ಸಂಗೊಳ್ಳಿರಾಯಣ್ಣ ಸರ್ಕಲ್ ಮುಖಾಂತರ ಹೋಗುವುದು


5. ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಎಂ.ಆರ್ .ಎಸ್ ಸರ್ಕಲ್ ಮುಖಾಂತರ ಹೋಗುವುದು.


6. ಶಿಕಾರಿಪುರ ಸೊರಬ ಆನವಟ್ಟಿ, ಕಡೆಯಿಂದ ಶಿವಮೊಗ್ಗಕೆ ಬರುವ ಮತ್ತು ಹೊರ ಹೋಗುವ ಎಲ್ಲಾ ಬಸ್ ಗಳು ಮತ್ತು ಭಾರಿ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್.ಲಕ್ಷ್ಮೀ ಟಾಕೀಸ್ ಸರ್ಕಲ್ ಪೊಲೀಸ್ ಚೌಕಿ . ಅಯ್ಯೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದನ್ನ ಆದೇಶಿಸಿದ್ದಾರೆ. 


ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ 


1. ಲಷ್ಕರ್ ಮೊಹಲ್ಲಾ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.


2. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ಮಾರ್ಗವಾದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ ಗಾಂಧಿಬಜಾರ್ 2ನೇ ಕ್ರಾಸ್ ನಾಗಪ್ಪ ಕೇರಿ -ಲಷ್ಕರ್ ಮೊಹಲ್ಲಾ ಮುಖ್ಯ ರಸ್ತೆ- ಓಲ್ಡ್ ಬಾರ್ ಲೈನ್ ರಸ್ತೆ-ಪೆನ್ನನ್ ಮೊಹಲ್ಲಾ -ಬಾಲ್ ರಾಜ್ ಅರಸ್ ರಸ್ತೆ- ಮಹಾವೀರ್ ಸರ್ಕಲ್ ಗೋಪಿ ಸರ್ಕಲ್ ನೆಹರು ರಸ್ತೆ- ಅಮೀರ್ ಅಹ್ಮದ್ ಸರ್ಕಲ್- ಬಿ.ಹೆಚ್ ರಸ್ತೆ-ಅಶೋಕ ಸರ್ಕಲ್-ಎನ್ ಟಿ ರಸ್ತೆ-ಗುರುದೇವ ರಸ್ತೆ-ಕ್ಲಾರ್ಕಪೇಟೆ-ನೂರಾನಿ ಮಸೀದಿ-ಕೆ.ಆರ್.ಪುರಂ ರಸ್ತೆ ಮಾರ್ಗವಾಗಿ ಅಮೀರ್ ಅಹ್ಮದ್ ಸರ್ಕಲ್ ವರೆಗಿನ ಮೆರವಣಿಗೆ ಮಾರ್ಗದಲ್ಲಿ ಮತ್ತು ಮೆರವಣಿಗೆ ಸಾಗುವ ಮಾರ್ಗದಲ್ಲಿ 100 ಮೀಟರ್ ವಾಹನ ನಿಲುಗಡೆ ಮಾಡಲಾಗುವುದು. 


3. ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು