ಶಿವಮೊಗ್ಗ/ಹೊಸನಗರ
ಶನಿವಾರ ಪಟ್ಟಣದ ನೆಹರು ಮೈದಾನದಲ್ಲಿ ನಡೆದ 14 ವರ್ಷದೊಳಗಿನ ಬಾಲಕ - ಬಾಲಕಿಯರ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್ನ್ಯಾಷನಲ್ ಸ್ಕೂಲ್ ಬಾಲಕರ ತಂಡ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದೆ.
ರಿಪ್ಪನ್ ಪೇಟೆ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ನಡೆದೆ ರೋಚಕ ಹಣಾ ಹಣಿಯಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್ನ್ಯಾಷನಲ್ ಸ್ಕೂಲ್ ಮಕ್ಕಳ ತಂಡ ಗೆಲವು ಪಡೆಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ಶಾಲೆಗೆ ಕೀರ್ತಿ ತಂದ ಮಕ್ಕಳನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಫೋಷಕರು ಅಭಿನಂದಿಸಿದ್ದಾರೆ.