ಅಗಲಿದ ಮಹಾಲಿಂಗಪ್ಪ


ಸುದ್ದಿಲೈವ್/ಭದ್ರಾವತಿ


ಕಾಗದ ನಗರದ ಎಂಟನೇ ವಾರ್ಡಿನ ನಿವಾಸಿ ಮಹಾಲಿಂಗಪ್ಪ (47) ಸೋಮವಾರ ತಡರಾತ್ರಿ ಅನಾರೋಗ್ಯದಿಂದ ನಿಧನರಾದರು. ತಾಯಿ, ಪತ್ನಿ, ಇಬ್ಬರು ಪುತ್ರರರನ್ನು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಗರದ ಬೈಪಾಸ್ ರಸ್ತೆ ಬುಳ್ಳಾಪುರ ಬಾಳೆಮಾರನಹಳ್ಳಿ ರಸ್ತೆಯಲ್ಲಿರುವ ಶ್ರೀ ಸತ್ಯಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ಮಂಗಳವಾರ ಸಂಜೆ ನೆರವೇರಿತು.


ಕೆಲವು ತಿಂಗಳುಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಸ್ತುತ ಎಚ್ಚರಿಕೆ ದಿನ ಪತ್ರಿಕೆ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತೀದ್ದರು. ಮಹಾಲಿಂಗಪ್ಪ  ಈ ಹಿಂದೆ ನಮ್ಮ ನಾಡು ಪತ್ರಿಕೆಯ ವರದಿಗಾರರಾಗಿದ್ದರು. ಕಳೆದ ಎರಡು ದಶಕಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಜಿಲ್ಲಾಮಟ್ಟದ ಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. 


ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸಿದ್ದರು. ಪತ್ರಕರ್ತರ  ಸಂಘದ  ಸಕ್ರಿಯ ಸದಸ್ಯರಾಗಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದರು.  ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಆರ್ ಬದರಿನಾರಾಯಣ ಶ್ರೇಷ್ಠಿ ಹಾಗು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ  ಬೆಳಿಗ್ಗೆ ಮಹಾಲಿಂಗಪ್ಪನವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆಯುವ ಮೂಲಕ ಸಂತಾಪ ಸೂಚಿಸಲಾಯಿತು.


ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸ್ಥಳದಲ್ಲೆ  ಮೃತರ ಅತ್ಮಕ್ಕೆ  ಶಾಂತಿ ಕೋರಿ ಅವರ ಕುಟುಂಬಕ್ಕೆ ದೈರ್ಯ ನೀಡಲಿ ಎಂದು ಪ್ರಾರ್ಥಿಸಲಾಯಿತು ಹಾಗೂ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು..


ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ. ಆರ್. ಬದರಿನಾರಾಯಣ ಶೆಟ್ಟಿ,  ಕಟ್ಟಡ ಸಮಿತಿ ಅಧ್ಯಕ್ಷ ಕಣ್ಣಪ್ಪ ರವರ ನೇತೃತ್ವದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಸಂಘದಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಳ್ಳುವ ಜೊತೆಗೆ ಎಲ್ಲರ ಜೊತೆ ಆತ್ಮೀಯತೆ ಬೆಳೆಸಿಕೊಂಡಿದ್ದರು. ಸಂಘದ ಪದಾಧಿಕಾರಿಯಾಗಿ ಸಲ್ಲಿಸಿರುವ ಸೇವೆ ಅವಿಸ್ಮರಣೀಯ. ಇವರ ಅಕಾಲಿಕ ನಿಧನ ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಎಂದು ತಿಳಿಸಲಾಯಿತು. ಪತ್ರಿಕಾ ಭವನಕ್ಕೆ ಅವರು ನೀಡಿದ ಅಳಿಲು ಸೇವೆಯನ್ನು ಸ್ಮರಿಸಲಾಯಿತು. 


ಸಂತಾಪ ಸೂಚಕ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಬಸವರಾಜ್, ಉಪಾಧ್ಯಕ್ಷ ಕೂಡ್ಲಿಗೆರೆ ಮಂಜುನಾಥ್, ಖಜಾಂಚಿ ಅನಂತಕುಮಾರ್, ಸದಸ್ಯರಾದ ಶಿವಶಂಕರ್, ಸುಭಾಷ್‌ರಾವ್ ಸಿಂಧ್ಯಾ, ಕೆ.ಆರ್ ಶಂಕರ್, ಸುದರ್ಶನ್, ಟಿ.ಎಚ್ ಸಂತೋಷ್ ಕುಮಾರ್, ಗಂಗಾನಾಯ್ಕಗೊಂದಿ, ಕಿರಣ್, ರೀನಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 


ನಗರಸಭಾ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ಬಿಕೆ. ಮೋಹನ್ ಸೇರಿದಂತೆ ಇತರರು ಮೃತರ ಅಂತಿಮ ದರ್ಶಣ ಪಡೆದರು. ಮಾಜಿ ನಗರಸಭಾ ಸದಸ್ಯ ವೆಂಕಟಯ್ಯ ಮೃತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.ಶಾಸಕ ಬಿಕೆ. ಸಂಗಮೇಶ್ವರ್ ಸಂತಾಪ ವ್ಯಕ್ತಪಡಿಸಿದರು. ಛಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷ  ಮತ್ತು ಪತ್ರಕರ್ತ ಸುರೇಶ್ ಅಂತಿಮ ದರ್ಶಣ ಪಡೆದು ಛಲವಾದಿ ಸಮಾಜದವತಿಯಿಂದ ಸಂತಾಪ ಸೂಚಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು