ಜೈಲಿನಲ್ಲಿ ಖೈದಿಗಳಿಂದ ಬೀಡಿಗಾಗಿ ಪ್ರತಿಭಟನೆ

 


ಸುದ್ದಿಲೈವ್/ಶಿವಮೊಗ್ಗ


ಜೈಲಿನಲ್ಲಿ ಖೈದಿಗಳಿಗೆ ರಾಜಾತೀಥ್ಯ ಸಿಗುತ್ತಿದೆ ಎಂಬ ಸುದ್ದಿ ಬಿರುಗಾಳಿಯಂತೆ ಬೀಸ ತೊಡಗಿದ ಬೆನ್ನಲ್ಲೇ ಶಿವಮೊಗ್ಗ ಜೈಲಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಬಿಗಿ‌ ಬಂದೋಬಸ್ತ್ ಬೆನ್ನಲ್ಲೇ ಖೈದಿಗಳ ಪ್ರತಿಭಟನೆ ಆರಂಭವಾಗಿದೆ.


ಶಿವಮೊಗ್ಗ ಜೈಲಿನಲ್ಲಿ ಬೀಡಿಗೆ ಬೇಡಿಕೆಯಿಟ್ಟು ಖೈದಿಗಳು ಬೆಳಿಗ್ಗೆ ಪ್ರತಿಭಟನೆ ಆರಂಭಿಸಿದ್ದಾರೆ. 
ಜೈಲಿನಲ್ಲಿ ಇವತ್ತು ಬೆಳಗಿನ ಉಪಾಹಾರವನ್ನು ತ್ಯಜಿಸಿರುವ ಕೈದಿಗಳು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಹೇಳಿದ್ದಾರೆ. ಅವರ ಮನವೊಲಿಸುವ ಸಲುವಾಗಿ ಕಾರಾಗೃಹ ಇಲಾಖೆಯ ಅಧಿಕಾರಿಗಳ ತಂಡ ಪ್ರಯತ್ನ ನಡೆಸಿತ್ತು.  ಆದಾಗ್ಯು ಅಧಿಕಾರಿಗಳ ಮಾತಿಗೆ ಕೈದಿಗಳು ಸುಮ್ಮನಾಗುತ್ತಿಲ್ಲ. ಬೇಕೆಬೇಕು ಬೀಡಿಯಾದರೂ ಬೇಕು ಎಂದು ಪ್ರತಿಭಟನೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.


ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಇತ್ತೀಚೆಗೆಷ್ಟೆ ಶಿವಮೊಗ್ಗ ಎಸ್‌ಪಿ ಮಿಥುನ್‌ ಕುಮಾರ್‌ ನೇತೃತ್ವದ 100 ಕ್ಕೂ ಹೆಚ್ಚು ಪೊಲೀಸರ ತಂಡ ರೇಡ್‌ ನಡೆಸಿತ್ತು. ಈ ವೇಳೆ ಮ್ಯಾಚ್‌ ಬಾಕ್ಸ್‌ ಹಾಗೂ ಬಿಡಿಯ ಬಂಡಲ್‌ ಮತ್ತು ಚಾರ್ಜರ್‌ ವಯರ್‌ ಸಿಕ್ಕಿತ್ತು. ಈ ಬಗ್ಗೆ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌  ಸಹ ದಾಖಲಾಗಿತ್ತು. ಇದರ ಬೆನ್ನಲ್ಲೆ ಶಿವಮೊಗ್ಗ ಜೈಲಿಗೆ ದರ್ಶನ್‌ ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನ ಶಿ್ಟ್ ಮಾಡಿದ್ದಾರೆ. ಆನಂತರ ಜೈಲಿನಲ್ಲಿ ಇನ್ನಷ್ಟು ಬಂದೋಬಸ್ತ್‌ ಮಾಡಲಾಗಿತ್ತು. ಇವೆಲ್ಲದರ ಪರಿಣಾಮವಾಗಿ ಕೈದಿಗಳಿಗೆ ಬೀಡಿಯು ಸಿಗಂದತಾಗಿದೆ. ಇದರಿಂದ ಸಿಟ್ಟಿಗೆದ್ದಿರುವ ಕೈದಿಗಳು ಪ್ರತಿಭಟನೆಗೆ ಇಳಿದಿದ್ದಾರೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು