ಸುದ್ದಿಲೈವ್/ಶಿವಮೊಗ್ಗ
ಇನ್ನೆನು ಶಿವಮೊಗ್ಗ ಮುಟ್ಟಿತು ಎನುವಷ್ಟರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಉಂಟಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸಾವು ಕಂಡಿದ್ದಾನೆ.
ಹರಿಹರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್‌ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್‌ಗೆ ಬೈಕ್‌ವೊಂದು ಅಡ್ಡ ಬಂದ ಕಾರಣ ಡಿಕ್ಕಿ ಉಂಟಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಡ್ಡ ಬಂದ ಬೈಕ್‌ನನ್ನ ತಪ್ಪಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ. ಸಾವು ಕಂಡಾತನನ್ನ ಮೋಹನ. ಸಿ(36) ಎಂದು ಗುರುತಿಸಲಾಗಿದೆ. ಈ ಅಪಘಾತ ಬೇಡರ ಹೊಸಳ್ಳಿ ಮತ್ತು ಹನಸವಾಡಿ ಮಧ್ಯೆ ಇಂದು ಮಧ್ಯಾಹ್ನ ಸುಮಾರು 3-15 ರ ವೇಳೆಗೆ ಸಂಭವಿಸಿದೆ.
ಮೋಹನ್ ಸಹ ಹನಸವಾಡಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಮೃತ ದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಕೊಂಡಯ್ಯಲಾಗಿದೆ.