ಅ.25 ರಂದು ಆಚಾರ್ಯತ್ರಯರ ಜಯಂತಿ



ಸುದ್ದಿಲೈವ್/ಶಿವಮೊಗ್ಗ

ಜಿಲ್ಲಾ ಬ್ರಾಹ್ಮಣ ಮಹಾಸಭಾ ದ ವತಿಯಿಂದ ಅ ೨೫ ರಂದು ಶ್ರೀ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ಆಚಾರ್ಯ ತ್ರಯರ ಜಯಂತಿಯನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಜಿಲ್ಲಾ ಬ್ರಾಹ್ಮಣ ಸಂಘದ ಅದ್ಯಕ್ಷ ಕೆ ಸಿ ನಟರಾಜ್ ಭಾಗವತ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿ ಆಚಾರ್ಯರುಗಳು ಪ್ರತಿಪಾದಿಸಿದ ಸಿದ್ಧಾಂತ ಹಾಗೂ ಸಂದೇಶಗಳನ್ನು ಜನ ಮಾನಸಕ್ಕೆ ತಲುಪಿಸುವ ಸದುದ್ದೇಶದಿಂದ ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಕಳೆದ ೫ ವರ್ಷಗಳಿಂದ ಆಚಾರ್ಯತ್ರಯರ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿದೆ. ಈ ವರ್ಷದ ಆಚಾರ್ಯತ್ರಯರ ಜಯಂತಿಯನ್ನು ಅ. ೨೫ ರ ಶುಕ್ರವಾರದಂದು ಶ್ರೀ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಿದೆ ಎಂದರು.

ಅAದು "ಪ್ರೊ. ಪವನ್ ಕಿರಣ್‌ರೆ", ಉಡುಪಿ ಇವರು ಉಪನ್ಯಾಸ ನೀಡಲಿದ್ದಾರೆ. ಶ್ರೀಯುತರು ಉಡುಪಿಯ ಆಸೆಮ್ಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿದ್ದು, ಯಕ್ಷಗಾನ ಪ್ರಸಂಗಗಳ ರಚನಾಕಾರರು ಹಾಗೂ ತಾಳ ಮದ್ದಲೆಯಲ್ಲಿ ಅರ್ಥಧಾರಿಗಳಾಗಿರುತ್ತಾರೆ ಎಂದರು.

ಅದೇ ದಿವಸ ಈ ಉಪನ್ಯಾಸ ಕಾರ್ಯಕ್ರಮದ ನಂತರ ನವರಾತ್ರಿ ಪ್ರಯುಕ್ತ ಏರ್ಪಡಿಸಲಾಗಿದ್ದ ವಿಪ್ರ ಮಹಿಳೆಯರಿಗಾಗಿ "ದೇವಿ ಕುರಿತ ಗೀತಗಾಯನ ಸ್ಪರ್ಧೆ"ಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಇರುತ್ತದೆ. ಸಮಾಜ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಕೊಡಬೇಕೆಂದು ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕಾರ್ಯದರ್ಶಿಗಳಾದ ಬಿ.ಕೆ. ವೆಂಕಟೇಶಮೂರ್ತಿ, ಪದಾಧಿಕಾರಿಗಳಾದ ಕೇಶವಮೂರ್ತಿ, ಡಾ ನಾಗಮಣಿ,ಸರಳಹೆಗ್ಗಡೆ. ಎಂ . ಎಸ್. ಸೂರ್ಯನಾರಾಯಣ್ ಇದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close