ಬೆಂಗಳೂರಿಗೆ ಶರಾವತಿ ನದಿ ತಿರುವು-ಸರ್ಕಾರದ ಬಳಿ ಅಂತಹ ಯಾವುದೇ ಯೋಜನೆ ಇಲ್ಲವೆಂದ ಸಾಗರದ ಶಾಸಕ

ಸುದ್ದಿಲೈವ್/ಸಾಗರ

ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ತಮ್ಮ ನಿಲುವನ್ನ ಬದಲಾಯಿಸಿದ್ದಾರೆ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಹೊನಗರದ ಮೂಲೆಗದ್ದೆ ಶ್ರೀ ಸದಾನಂದ ಯೋಗಾಶ್ರಮಕ್ಕೆ ಸೌಹಾರ್ದ ಭೇಟಿ ನೀಡಿ ವೇಳೆ ಮಾಧ್ಯಮಗಳಿಗೆ ಮಾತನಾಡಿದ ಅವರು, ಯೋಜನೆಯ ಅನುಷ್ಠಾನ ಸತ್ಯಕ್ಕೆ ದೂರದ ಮಾತಾಗಿದೆ. ಜನತೆ ಆತಂಕ ಪಡುವ ಅಗತ್ಯವಿಲ್ಲ. ಕುಡಿಯುವ ನೀರಿಗಾಗಿ ಮಲೆನಾಡು ಭಾಗದ ಬೆಳಕಿನ ನದಿ ಎಂದೇ ಪ್ರಖ್ಯಾತಿ ಹೊಂದಿರುವ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದಿದ್ದಾರೆ. 

ಹಿಂದೆ ಬೊಮ್ಮಯಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆಡಳಿತದಲ್ಲಿ ಇದ್ದಾಗಲೇ ಈ ಯೋಜನೆ ಬಗ್ಗೆ ಯೋಜನೆ ರೂಪಿಸಿತ್ತು. ಶರಾವತಿ ನದಿ ನೀರನ್ನು ಕುಡಿಯುವ ಸಲುವಾಗಿ  ಬೆಂಗಳೂರಿಗೆ ಒಯ್ಯಲು ಯೋಜನೆ ರೂಪಿಸಲು ಸರ್ಕಾರ ಮುಂದಾಗಿತ್ತು. ಬದಲಾವಣೆ ರಾಜಕೀಯ ಸನ್ನಿವೇಶದಲ್ಲಿ ಯೋಜನೆ ಕೈಗೂಡಲಿಲ್ಲವೆಂದು ವಿವರಿಸಿದರು. 

ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಈ ಕುರಿತು ಡಿಪಿಆರ್ ತಯಾರಿಸಿ ಸಾಧಕ-ಬಾಧಕ ಕುರಿತು ಚರ್ಚೆ ನಡೆದಿದೆ. ಮಲೆನಾಡಿಗರಿಗೆ ತಮ್ಮ ಪೂರ್ವಿಕರ ಕಾಲದಿಂದ ಶರಾವತಿ ನದಿ ಕುರಿತು ಇರುವ ಅನ್ಯೋನ್ಯ ಸಂಬಂಧ ಇದೆ.



ಅಣೆಕಟ್ಟು ನಿರ್ಮಾಣದಿಂದ ಆದ ಮುಳುಗಡೆ ಸಂತ್ರಸ್ತ ಕುಟುಂಬಗಳ ನೋವು, ಜನಜೀವನ, ಕಥೆ-ವ್ಯಥೆ  ಕುರಿತಂತೆ ಸರ್ಕಾರ ಸಮಗ್ರ ಮಾಹಿತಿಯನ್ನು ಈಗಾಗಲೇ ಸಂಗ್ರಹಿಸಿದೆ.ಕೆಲವು ಪರಿಸರಾಸ್ತರು ಯೋಜನೆಯನ್ನ ವಿರೋಧಿಸಿದ್ದಾರೆ. ಅನುಷ್ಠಾನಗೊಳ್ಳುವ ಬಗ್ಗೆ ಸರ್ಕಾರದ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲವೆಂದಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close