ಸುದ್ದಿಲೈವ್/ಶಿವಮೊಗ್ಗ
ಮೊನ್ನೆ ಬಿದ್ದ ಮಳೆ ನೀರು ಅನಾಹುತವನ್ನ ಸೃಷ್ಟಿಸಿರುವ ಜೊತೆ ಕಲುಷಿತಗೊಂಡಿರುವ ಹಿನ್ನಲೆಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಕೆಯನ್ನ ನೀಡಿದ್ದಾರೆ.
ಅಕಾಲಿಕ ಮಳೆಯಿಂದಾಗಿ ನೀರು ಕಲುಷಿತವಾಗಿರುವುದರಿಂದ ಸಾರ್ವಜನಿಕರು ಮಂಡಳಿಯು ಸರಬರಾಜು ಮಾಡುವ ನೀರನ್ನ ಕುದಿಸಿ ಆರಿಸಿ ಕುಡಿಯುವಂತೆ ಮನವಿ ಮಾಡಿದ್ದಾರೆ.
ಶಿವಮೊಗ್ಗ ನಗರ ನೀರು ಸರಬರಾಜು ವ್ಯವಸ್ಥೆಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ನಿರ್ವಹಿಸಲಾಗುತ್ತಿದ್ದು, ಅ.08ರಂದು ಬಂದ ಮಳೆಯಿಂದಾಗಿ ಗಾಜನೂರು ಡ್ಯಾಂ ಮತ್ತು ತುಂಗಾ ನದಿಯ ನೀರಿನಲ್ಲಿ ಕೆಂಪು ಬಣ್ಣವು (ಟರ್ಬಿಡಿಟಿ) ಹೆಚ್ಚಾಗಿದೆ,
ನೀರನ್ನು ಸಾರ್ವಜನಿಕರು ಕುದಿಸಿ, ಆರಿಸಿ ಕುಡಿಯುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.