ಕನ್ನಡ ಭಾಷೆಯ ಬದಲು ಉರ್ದು ಭಾಷೆ ಕಡ್ಡಾಯ-ಪ್ರತಿಭಟನೆ ನಡೆಸಿದ ಹಿಂದೂ ಜನಜಾಗೃತಿ ಸಮಿತಿ


 

ಸುದ್ದಿಲೈವ್/ಶಿವಮೊಗ್ಗ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ಮಾಡಿದ್ದನ್ನು ವಿರೋಧಿಸಿ ಹಿಂದು  ಜನಜಾಗ್ರತಿ ಸಮಿತಿಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು  ಪ್ರತಿಭಟನೆ ನಡೆಸಿದರು.

ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ.  ಈ ಮೂಲಕ ಕರ್ನಾಟಕ ಸರ್ಕಾರ ಕ್ರೈಸ್ತರಿಗೆ ಹಿಂದುಗಳಿಗೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿರುವುದು ಸ್ಪಷ್ಟ ಗಮನಕ್ಕೆ ಬರುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿಯು  ಆಕ್ರೋಶ ವ್ಯಕ್ತ ಪಡಿಸಿದರು.

ಕರ್ನಾಟಕದಲ್ಲಿ ಕನ್ನಡವೇ ರಾಜ್ಯಭಾಷೆ. ಈ ರೀತಿ ಉರ್ದು ಭಾಷೆಗೆ ಕಡ್ಡಾಯ ಮಾಡಿ ಕನ್ನಡಿಗರನ್ನು ಸಹ ಅವಮಾನ ಮಾಡಿರುವುದು ಕಂಡುಬರುತ್ತದೆ.ಕಾಂಗ್ರೆಸ್ ಶಾಸನವಿರುವ ಕರ್ನಾಟಕದಲ್ಲಿ ಪದೇ ಪದೇ ಹಿಂದೂಗಳ ಬಗ್ಗೆ ತುಷ್ಟಿಕರಣ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ಕೇವಲ ಇದೊಂದೇ ಘಟನೆ ಅಲ್ಲದೆ ಇತ್ತೀಚಿಗೆ ರಾಜ್ಯದಲ್ಲಿ ನಡೆದ ಅನೇಕ ಘಟನೆಗಳೂ ಕಾಂಗ್ರೆಸ್ ನ ಓಲೈಕೆ ರಾಜಕಾರಣದ ಷಡ್ಯಂತ್ರವನ್ನು ಎತ್ತಿ ತೋರಿಸುತ್ತದೆ.  ಈ ಬಾರಿ ಶಿಕ್ಷಕ ದಿನಾಚರಣೆ ವೇಳೆ, ಉಡುಪಿಯ ಪ್ರಾಂಶುಪಾಲರಾದ ಬಿ ಜಿ ರಾಮಕೃಷ್ಣ ಇವರು ಹಿಜಾಬ್ ಘಟನೆ ವೇಳೆ ಹಿಜಾಬ್ ಧರಿಸಿ ಬರಲು ವಿರೋಧಿಸಿದ್ದರೆಂದು ಅವರಿಗೆ ಸಲ್ಲಬೇಕಿದ್ದ 'ಉತ್ತಮ ಶಿಕ್ಷಕ' ಪ್ರಶಸ್ತಿ ರದ್ದುಗೊಳಿಸಲಾಯಿತು. ನಾಗಮಂಗಲದಲ್ಲಿ ನಡೆಯುತ್ತಿದ್ದ ಶಾಂತಿಯುತ ಗಣೇಶೋತ್ಸವದ ಮೇಲೆ ಮತಾಂಧರು ಕಲ್ಲು ತೂರಾಟ ಮಾಡಿದ್ದರೂ, ಈ ಪ್ರಕರಣದಲ್ಲಿ ಆರೋಪಿ ನಂ 1 ರಿಂದ 23 ವರೆಗೆ ಹಿಂದೂ ಕಾರ್ಯಕರ್ತರ ಹೆಸರುಗಳನ್ನು ಸೇರಿಸಲಾಗಿತ್ತು ಅಷ್ಟೇ ಅಲ್ಲದೆ ಈ ಬಾರಿಯ ಗಣೇಶೋತ್ಸವ ಆಚರಣೆ ಸಮಯದಲ್ಲಿ ಸಹ ಪ್ರಸಾದಕ್ಕೆ ಬಿಬಿಎಂಪಿ FSSAI ಕಡ್ಡಾಯಗೊಳಿಸಿತ್ತು. ಈ ಎಲ್ಲ ಘಟನೆಗಳನ್ನು ನೋಡುವಾಗ ಕಾಂಗ್ರೆಸ್ ಹಿಂದೂಗಳ ಮೇಲೆ ನಡೆಸುತ್ತಿರುವ ಅನ್ಯಾಯಕ್ಕೆ ಕೊನೆಯೇ ಇಲ್ಲದಂತಾಗಿದೆ ಮನವಿಯಲ್ಲಿ ತಿಳಿಸಲಾಗಿದೆ. 

ಇಲಾಖೆಯ ಈ ಆದೇಶವನ್ನು ಕೂಡಲೇ ಹಿಂಪಡೆದು ಜಾಲತಾಣದಲ್ಲಿ ಅವಶ್ಯಕ ಬದಲಾವಣೆ ಮಾಡಬೇಕೆಂದು ಮನವಿ ಮೂಲಕ ಆಗ್ರಹಿಸಲಾಗಿದೆ.ಪ್ರಮುಖರಾದ ದಿನೇಶ ಚೌಹಾಣ, ಶ್ಯಾಮಸುಂದರ್, ಪರಿಸರ ರಮೇಶ, ಕಾರ್ತೀಕ್, ವಕೀಲರಾದ ವಾಗೀಶ್, ಕೃಷ್ಣ, ನವೀನ್ ಕುಮಾರ, ಪ್ರಭಾಕರ್, ಶಿವಾಜಿ, ವಾಸಣ್ಣ ಭದ್ರಾವತಿ,ಪ್ರಕಾಶ್ ಮೊದಲಾದವರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close