Girl in a jacket

ಕನ್ನಡ ಜ್ಯೋತಿಗೆ ಭವ್ಯ ಸ್ವಾಗತ

 


ಸುದ್ದಿಲೈವ್/ಶಿವಮೊಗ್ಗ

ಮೈಸೂರು ರಾಜ್ಯವು ಕರ್ನಾಟಕವೆಂದು ನಾಮಕರಣಗೊಂಡು ೫೦ ವರ್ಷ ಕಳೆದ ಹಿನ್ನಲೆಯಲ್ಲಿ ಕರ್ನಾಟಕ ಸಂಭ್ರಮ-೫೦ ರ ಅಡಿಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಅಭಿಯಾನದ ಅಂಗವಾಗಿ ಕನ್ನಡ ಜ್ಯೋತಿ ರಥ ಯಾತ್ರೆಯನ್ನ ರಾಜ್ಯಾದ್ಯಂತ ಸಂಚರಿಸಲು ರಾಜ್ಯ ಸರ್ಕಾರ ಚಾಲನೆ ನೀಡಿದೆ. 

ಅದರ ಹಿನ್ನಲೆಯಲ್ಲಿ ಕನ್ನಡ ಜ್ಯೋತಿ ಜಿಲ್ಲೆಗೆ ಅ.೧೧ ರಂದು ಆಗಮಿಸಿದೆ. ಹೊಸ ನಗರಕ್ಕೆ ಅ.೧೧ ರಂದು ಆಗಮಿಸಿದ್ದು, ತೀರ್ಥಹಳ್ಳಿಗೆ ಅ.೧೩ ರಂದು, ತೀರ್ಥಹಳ್ಳಿಗೆ, ಅ.೧೪ ರಂದು ಭದ್ರಾವತಿಗೆ ಆಗಮಿಸಿತ್ತು. ಇಂದು ಶಿವಮೊಗ್ಗಕ್ಕೆ ಆಗಮಿಸಿದ ಜ್ಯೋತಿಯನ್ನ ಜಿಲ್ಲಾಡಳಿತ ಸ್ವಾಗತಿಸಿದೆ. 

ನಗರದ ಶಿವಪ್ಪನಾಯಕ ವೃತ್ತಕ್ಕೆ ಆಗಮಿಸಿದ್ದ ಜ್ಯೋತಿಯನ್ನ ಸ್ವಾಗತಿಸಿ ಮಾತನಾಡಿದ ಶಾಸಕ ಚೆನ್ನಬಸಪ್ಪ, ಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ. ಕನ್ನಡದ ಉಳಿವಿಗಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಬೇಕು.ಕನ್ನಡ ಭಾಷೆಯ ಉಳಿವಿಗಾಗಿ ಅನೇಕ ಕನ್ನಡಪರ ಸಂಘಟನೆಗಳು ಹೋರಾಟವನ್ನು ನಡೆಸುತ್ತಿದ್ದಾರೆ. ಕನ್ನಡ ಭಾಷೆಯ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಹೋರಾಟಗಳು ನಡೆಯುತ್ತಾ ಬಂದಿವೆ. ಅದೇ ರೀತಿ ಗೋಕಾಕ್ ಚಳವಳಿಯ ನೆನಪು ಇಂದಿಗೂ ಅಮರವಾಗಿದ್ದು ಡಾ.ರಾಜ್ ಕುಮಾರ್ ಸೇರಿದಂತೆ ಅನೇಕ ನಟನಟಿಯರು ಕನ್ನಡ ಪರವಾದ ಹೋರಾಟದಲ್ಲಿ ಭಾಗವಹಿಸಿದ್ದರು. ನಾವೆಲ್ಲ ಕನ್ನಡ ಪರವಾದ ಹೋರಾಟಗಳನ್ನು ಸ್ಮರಿಸಬೇಕು ಎಂದರು.

ಕನ್ನಡ ಒಂದು ಭಾಷೆಯಲ್ಲ, ಅದು ನಮ್ಮ ಬದುಕಾಗಿದೆ. ಕವಿಗಳು, ಸಾಹಿತಿಗಳ ಮೂಲಕ ಅಕ್ಷರ ರೂಪದಲ್ಲಿ ಕನ್ನಡ ಭಾಷೆ ಜೀವಂತವಾಗಿರಲು ಸಹಕಾರಿಯಾಗಿದೆ. ಪ್ರತಿಯೊಬ್ಬರು ಕನ್ನಡ ಸಾಹಿತ್ಯಗಳನ್ನು ಓದುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳಸಬೇಕಾಗಿದೆ. ಕನ್ನಡ ರಥ ಇಡೀ ರಾಜ್ಯಾದ್ಯಂತ ಸಂಚಾರ ನಡೆಸುತ್ತಿದ್ದು ಶಿವಮೊಗ್ಗ ನಗರಕ್ಕೆ ಆಗಮಿಸಿರುವ ರಥವನ್ನು ಅದ್ದೂರಿಯಾಗಿ ಸ್ವಾಗತಿಸಿ ಗೌರವಿಸಲಾಗಿದೆ ಎಂದರು.

ಕನ್ನಡಜ್ಯೋತಿ ರಥಯಾತ್ರೆ ಶಿವಪ್ಪ ನಾಯಕ ವೃತ್ತದಿಂದ ಗೋಪಿವೃತ್ತ ಮರ‍್ಗವಾಗಿ ಮಹಾವೀರ ವೃತ್ತ ಕುವೆಂಪು ರಂಗಮಂದಿರದವರೆಗೆ ಸಾಗಿ ಬಂದಿದ್ದು ಮಹಿಳಾ ಮತ್ತು ಪುರುಷ ಡೊಳ್ಳು ತಂಡ ಹಾಗೂ ಇತರ ಕಲಾಮೇಳದೊಂದಿಗೆ ಮೆರವಣಿಗೆ ನಡೆಸಲಾಯಿತು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ, ತಹಶೀಲ್ದಾರ್ ಗಿರೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನರ‍್ದೇಶಕ ಉಮೇಶ್ ಹೆಚ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಡಿ ಮಂಜುನಾಥ್, ರೋಟರಿ ಸಂಸ್ಥೆಯ ವಿಜಯಕುಮಾರ್, ವಿವಿಧ ಕನ್ನಡಪರ ಸಂಘಟನೆ ಪದಾಧಿಕಾರಿಗಳು, ಸರ‍್ವಜನಿಕರು ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು