Girl in a jacket

ಮುರಿದು ಬಿದ್ದ ಸೇತುವೆ



ಸುದ್ದಿಲೈವ್/ಭದ್ರಾವತಿ

ಭದ್ರಾವತಿ ತಾಲೂಕಿನಲ್ಲಿ ಕಳೆದ ಎರಡು ದಿನದ ಹಿಂದೆ ಸುರಿದಿದ್ದ ಧಾರಾಕಾರ ಮಳೆಯಿಂದಾಗಿ ಅನಾಹುತಗಳು ನಿಧಾನವಾಗಿ ಬೆಳಕಿಗೆ ಬರುತ್ತಿದೆ. ಒಂದು ವರೆ ಗಂಟೆಯಲ್ಲಿ 80 ಮಿಮಿ ಮಳೆಗ ಸುರಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಅನಾಹುತ ಸಂಭವಿಸಿದ ಚಿತ್ರ ಲಭ್ಯವಾಗಿತ್ತು. ಈಗ ಮತ್ತೊಂದು ಚಿತ್ರಣ ತಡವಾಗಿ ಬೆಳಕಿಗೆ ಬಂದಿದೆ. 

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಧಾರಾಕಾರ ಮಳೆಗೆ ಸೇತುವೆಯೊಂದು ಕುಸಿದು ಹೋಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಭದ್ರಾ ನಾಲೆಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಧಸಕ್ ಎಂದು ಬಿದ್ದುಹೋಗಿದ್ದು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದೆ. 

ಹಂಚಿನ ಸಿದ್ದಾಪುರ ಗ್ರಾಮದಿಂದ ಸಿದ್ದೇಶ್ವರ ದೇವಸ್ಥಾನ ಹಾಗು ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಕುಸಿದು ಹೋಗಿದೆ. ಸಾರ್ವಜನಿಕರು ಪರದಾಡುವಂತಾಗಿದೆ. ಸೇತುವೆ ಶೀಘ್ರ ನಿರ್ಮಿಸಿಕೊಡುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Suddi Live