ಸುದ್ದಿಲೈವ್/ಶಿವಮೊಗ್ಗ
ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಬ್ರೇಕ್ ಹಾಕಬೇಕು ಎಂದು ಆಗ್ರಹಿಸಿ ಇಂದು ಶಾಸಕಿ ಶಾರದಾ ಪೂರ್ಯನಾಯ್ಕ್, ರಾಜ್ಯ ರೈತ ಸಂಘದ ವತಿಯಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಯವರನ್ನ ಭೇಟಿಯಾಗಿ ಮನವಿ ಸಲ್ಲಿಸಿದರು.
ಇಂದು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಅರಣ್ಯ ಹಾಗೂ ಜೀವಿಶಾಸ್ತ್ರ ಪರಿಸರ ಸಚಿವರಾದ ಈಶ್ವರ್ ಖಂಡ್ರೆಯವರಿಗೆ, ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಹೋಬಳಿ ಸಾಗುವಳಿ ಪಡೆದು ಖಾತೆ, ಪಹಣಿ ಇರುವ ರೈತರ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದು ತಕ್ಷಣವೇ ನಿಲ್ಲಿಸುವಂತೆ ಹಾಗೂ ಪುರದಾಳ್, ಬೆಳ್ಳೂರು, ತಮ್ಮಡಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸತತವಾಗಿ ಕಾಡನೆ ದಾಳಿಯಿಂದ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಅವರ ಕುಟುಂಬಕ್ಕೆ 25ಲಕ್ಷ ಪರಿಹಾರ ಹಾಗೂ ಬೆಳೆ ನಷ್ಟಕ್ಕೆ ಪರಿಹಾರ ಕೊಡಬೇಕು ಮತ್ತು ಇತರೆ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಾಲಾಯಿತು.
ಕಾಡಾನೆಗಳನ್ನು ಗ್ರಾಮಗಳಿಗೆ, ರೈತರ ಜಮೀನಿಗೆ ಬರದಂತೆ ತಡೆಯುವಂತೆ ಅರಣ್ಯ ಇಲಾಖೆಗೆ ಆದೇಶ ನೀಡುವಂತೆ ಮನವಿ ಸಲ್ಲಿಸಲಾಯಿತು. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ತಕ್ಷಣವೇ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಈ ಸಂಧರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ.ಎಂ ಚಂದ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್, ಜಿಲ್ಲಾ ಉಪಾಧ್ಯಕ್ಷರಾದ ಎಂ.ಮಹದೇವಪ್ಪ, ಶಿವಮೊಗ್ಗ ತಾ|| ಅಧ್ಯಕ್ಷರಾದ ಸಿ.ಚಂದ್ರಪ್ಪ, ಶಿವಮೊಗ್ಗ ತಾ|| ಪ್ರಧಾನ ಕಾರ್ಯದರ್ಶಿ ಜ್ಞಾನೇಶ್, ಭದ್ರಾವತಿ ತಾ|| ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ,ಹಾಗೂ ರೈತ ಮುಖಂಡರು ಹಾಜರಿದ್ದರು.