ಸುದ್ದಿಲೈವ್/ಸಾಗರ
ವಾಲಿಬಾಲ್ ತರಬೇತಿ ನೀಡುತ್ತಿದ್ದ ಶಿಕ್ಷಕ ಶಾಲಾ ಆವರಣದಲ್ಲಿಯೇಕುಸಿದು ಬಿದ್ದು ನಿಧನರಾಗಿದ್ದಾರೆ. ಇಲ್ಲಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಚಿತ್ರಕಲೆ ಶಿಕ್ಷಕ ಗಜಾನನ ಹಿರೇಮಠ್ (50), ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಶಿಕ್ಷಕ ಗಜಾನನ ಅವರು ಚಿತ್ರಕಲೆ ಮತ್ತು ಕ್ರೀಡೆ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದರು.ಬುಧವಾರ ಎಂದಿನಂತೆ ವಿದ್ಯಾರ್ಥಿಗಳಿಗೆ ವಾಲಿಬಾಲ್ ಆಟದ ಬಗ್ಗೆ ತರಬೇತಿ ನೀಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಕುಸಿದು ಬಿದ್ದ ಶಿಕ್ಷಕ ಗಜಾನನ ಅವರನ್ನು ತಕ್ಷಣ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲು ಕೊಂಡುಯ್ಯುವಾಗ ಮಾರ್ಗ ಮಧ್ಯೆದಲ್ಲಿಯೇ ನಿಧನ ಹೊಂದಿದರು.
ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ,ಶಾಲಾ ಆಡಳಿತ ಮಂಡಳಿ,ಶಿಕ್ಷಕ ವರ್ಗದವರು ಭೇಟಿ ನೀಡಿದ್ದಾರೆ.ಗಜಾನನ ಅವರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಶಿಕ್ಷಕರನ್ನ ಕಳೆದುಕೊಂಡ ಕುಟುಂಬದವರ ಆಕ್ರಂಧನ ಮುಗಿಲು ಮುಟ್ಟಿದೆ.