ಸುದ್ದಿಲೈವ್/ತೀರ್ಥಹಳ್ಳಿ
ಕಾಡಾನೆ ದಾಳಿಯಿಂದ ಬತ್ತದ ಬೆಳೆ ಸಂಪೂರ್ಣ ನಾಶವಾದ ಘಟನೆ ಗುರುವಾರ ರಾತ್ರಿ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಆಗುಂಬೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿನಲ್ಲಿ ಗುರುವಾರ ರಾತ್ರಿ ಕಾಡಾನೆ ಆಗಮಿಸಿ ಬೆಳೆದಂತಹ ಬತ್ತದ ಬೆಳೆಯನ್ನು ಸಂಪೂರ್ಣ ನಾಶ ಮಾಡಿದೆ.
ಈಗಾಗಲೇ ಎರಡು ಮೂರು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಓಡಾಟ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರು ಸ್ಪಂದನೆ ಮಾಡುತ್ತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಬೆಳೆದಂತಹ ಬೆಳೆ ನಾಶವಾಗಿರುವುದಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.