ಗುತ್ತಿಗೆ ಆಧಾರದ ನೇಮಕಾತಿಗೆ ಅರ್ಜಿ ಆಹ್ವಾನ


ಸುದ್ದಿಲೈವ್/ಶಿವಮೊಗ್ಗ

ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

 ಜಿಲ್ಲಾ ಸಲಹೆಗಾರರು 01 ಹುದ್ದೆ ವಿದ್ಯಾರ್ಹತೆ ಬಿಎಸ್‌ಸಿ(ಕೃಷಿ) ಪದವಿ ಹಾಗೂ ಸ್ನಾತಕೋತ್ತರ ಪದವಿ, ತಾಂತ್ರಿಕ ಸಹಾಯಕರು 02 ಹುದ್ದೆ ವಿದ್ಯಾರ್ಹತೆ ಬಿ.ಎಸ್.ಸಿ(ಕೃಷಿ) ಪದವಿ, ಉತ್ತಮ ಕಂಪ್ಯೂಟರ್ ಪರಿಣಿತಿ, ಕೃಷಿ ಸಂಶೋಧನೆ ಹಾಗೂ ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವ ಉಳ್ಳವರಿಗೆ ಪ್ರಾಶಸ್ತö್ಯ ಕೊಡಲಾಗುವುದು.

 ಈ ನೇಮಕಾತಿಯು ದಿ: 31-03-2025 ರವರೆಗೆ ಅಥವಾ ಕೃಷಿ ಆಯುಕ್ತಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಸರ್ಕಾರಿ ಇಲಾಖೆ/ಸಂಸ್ಥೆಗಳಿAದ ನಿವೃತ್ತಿಯಾಗಿದ್ದಲ್ಲಿ (ಪಿಂಚಣಿ ಪಡೆಯುತ್ತಿದ್ದಲ್ಲಿ) ಈ ನೇಮಕಾತಿಗೆ ಅರ್ಹರಿರುವುದಿಲ್ಲ.

 ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ವಿವರಿಸಿರುವ ಹುದ್ದೆಗಳಿಗೆ ಕನಿಷ್ಟ ವಯೋಮಿತಿ 18 ವರ್ಷಗಳು, ಗರಿಷ್ಟ ಸಾಮಾನ್ಯ 35, ಪ.ಜಾತಿ/ಪ.ಪಂ/ಪ್ರವರ್ಗ-1 40 ವರ್ಷಗಳು.

 ಆಸಕ್ತರು ಅರ್ಜಿ ನಮೂನೆಯನ್ನು ಜಂಟಿ ನಿರ್ದೇಶಕರ ಕಚೇರಿ ಓ ಟಿ ರಸ್ತೆ ಶಿವಮೊಗ್ಗ ಇಲ್ಲಿಂದ ಅರ್ಜಿಯನ್ನು ಪಡೆದು ನ.05 ರೊಳಗೆ ಸೀಲು ಮಾಡಿದ ಲಕೋಟೆಯಲ್ಲಿ ಮುದ್ದಾಂ/ನೋಂದಣಿ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು ಶಿವಮೊಗ್ಗ ಇವರಿಗೆ ಸಲ್ಲಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close