ಸುದ್ದಿಲೈವ್/ಶಿವಮೊಗ್ಗ
25ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6,7,8 ಮತ್ತು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮ ರಕ್ಷಣಾ ಕಲೆ – ಕರಾಟೆ ತರಬೇತಿಯನ್ನು ನೀಡಲು ಅರ್ಹ ಸಂಸ್ಥೆ/ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನ.06 ರೊಳಗಾಗಿ ಅರ್ಜಿಯನ್ನು ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್ ಅಂಬೇಡ್ಕರ್, ಇಂದಿರಾ ಗಾಂಧಿ ಶ್ರೀ ನಾರಾಯಣ ಗುರು, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಸಂಸ್ಥೆ ಅಥವಾ ತರಬೇತುದಾರರು ಮಹಿಳಾ ತರಬೇತುದಾರರನ್ನೆ ಒದಗಿಸಬೇಕಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.