ಸುದ್ದಿಲೈವ್/ಶಿವಮೊಗ್ಗ
ಶಾರ್ಟ್ ಸರ್ಕ್ಯೂಟ್‌ನಿಂದ ಹಾರ್ಡ್‌ವೇರ್ ಅಂಗಡಿಗೆ (shop) ಬೆಂಕಿ ತಗುಲಿ ನಗದು ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಆಹುತಿಯಾದ ಘಟನೆ ಆಯನೂರಿನಲ್ಲಿ ನಡೆದಿದೆ.
ಆಯನೂರಿನಲ್ಲಿ ಬರುವ ಸಿದ್ದೇಶ್ವರ ದೇವಸ್ಥಾನ ಬಳಿ ಬರುವ ಆರ್.ವಿ.ಟ್ರೇಡರ್ಸ್ ಕಬ್ಬಿಣ ಹಾಗೂ ಸಿಮೆಂಟ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಶಾರ್ಟ್ ಸರ್ಕಿಟ್‌ನಿಂದ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಬೆಂಕಿ ಹೊತ್ತಿದ ಕೆಲವೇ ನಿಮಿಷದಲ್ಲಿ ವ್ಯಾಪಕವಾಗಿ ಹರಡಿದೆ. ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ. ಮೆಸ್ಕಾಂ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.