ತೀರ್ಥಹಳ್ಳಿ ತಹಸೀಲ್ದಾರ್ ಜಕ್ಕಣ್ಣ ಗೌಡರ್ ಹೃದಯಘಾತದಿಂದ ನಿಧನ


ಸುದ್ದಿಲೈವ್/ತೀರ್ಥಹಳ್ಳಿ 

ತಾಲೂಕು ದಂಡಾಧಿಕಾರಿಗಳಾದ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಇವರು ನ್ಯಾಯಾಲಯದ ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ದರಿಂದ 

ಇವರು ಮೂಲತಃ ಗದಗ ಜಿಲ್ಲೆಯವರು ಆಗಿರುವುದರಿಂದ ಪಾರ್ಥೀವ ಶರೀರವನ್ನ ಗದಗ ತೆಗೆದುಕೊಂಡು ಹೋಗುವ ಸಾಧ್ಯತೆ ಇದೆ. ಗದಗಿನಲ್ಲಿ ಅಂತ್ಯ ಕ್ರಿಯೆ ನಡೆಯುವ ಸಾಧ್ಯತೆ ಇದೆ.‌

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close