ಸುದ್ದಿಲೈವ್/ಶಿವಮೊಗ್ಗ
ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ತಾಲೂಕಿನ ಯಡವಾಲದಲ್ಲಿ ಅ.08 ರಂದು ಬುಧವಾರ ನಡೆದಿದ್ದ ಘಟನೆ ಇದಾಗಿದ್ದು ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ.
ಚಿನ್ನಿಕಟ್ಟೆ ಗ್ರಾಮದ ಇಕ್ಬಾಲ್ (40) ಅ.08 ರಂದು ನೀರಿನಲ್ಲಿ ಕೊಚ್ಚಿ ಹೋಗಿದ್ದ. ಮಳೆಯಿಂದಾಗಿ ರಭಸವಾಗಿ ಹರಿಯುತ್ತಿದ್ದ ಕೊಂಡಜ್ಜಿ ಹಳ್ಳದ ಸೇತುವೆ ದಾಟುವಾಗ ಬೈಕ್ ಸಮೇತ ಕೊಚ್ಚಿ ಹೋಗಿದ್ದ.
ಹಳ್ಳದಲ್ಲಿ ಒಂದು ಕಿ.ಮೀ. ದೂರದಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ.ಮೃತದೇಹಕ್ಕಾಗಿ ಹಳ್ಳದಲ್ಲಿ ಶೋಧ ಕಾರ್ಯ ನಡೆಸಿದ್ದ ಅಗ್ನಿಶಾಮಕ ಸಿಬ್ಬಂದಿಗೆ ಮೂರು ದಿನದ ಬಳಿಕ ಮೃತದೇಹ ಪತ್ತೆಯಾಗಿದೆ.