ಸಭೆ ಯಶಸ್ವಿ


ಸುದ್ದಿಲೈವ್/ಬೆಂಗಳೂರು

ಶರಾವತಿ ಮುಳುಗಡೆ ಸಂತ್ರಸ್ತರ ಹೋರಾಟ ಕೊನೆಗೂ ಒಂದು ಹಂತಕ್ಕೆ ತಲುಪಿದೆ. ಸಚಿವ ಮಧು ಬಂಗಾರಪ್ಪ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಜೊತೆಯ ನಡೆದ ಸಭೆ ಕೊಂಚ ರೈತರಲ್ಲಿ ಕೊಂಚ ನೆಮ್ಮದಿ ತಂದಿದೆ. 

ಇಂದು ವಿಧಾನಸೌಧದ ಕಚೇರಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ  ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ "ಶರಾವತಿ ಮುಳುಗಡೆ ಸಂತ್ರಸ್ತರು ಹಾಗೂ ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಹಾಗೂ ಸಮಸ್ಯೆಗಳ ಕುರಿತು" ಮಹತ್ವದ ಸಭೆ ನಡೆಸಲಾಯಿತು.

ಶಿವಮೊಗ್ಗ ಜಿಲ್ಲೆಯ ಜಲವಿದ್ಯುತ್ ಯೋಜನೆಗಳು ಹಾಗೂ ನೀರಾವರಿ ಯೋಜನೆಗಳ ಸಂತ್ರಸ್ತರ ಪುನರ್ವಸತಿ, ಭೂಮಿ ಸಮಸ್ಯೆ ಹಾಗೂ ಇತರೆ ಭೂ ಹಕ್ಕಿನ ಸಮಸ್ಯೆಗಳ ಪರಿಹಾರಕ್ಕಾಗಿ ಹಿರಿಯ ಐ.ಎ.ಎಸ್ ಅಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆಯಾಗಬೇಕು ಎಂದು ತಿಳಿಸಿದೆನು.

ವಿವಿಧ ಭೂಮಿ ಮಂಜೂರಾತಿ ಕಾಯ್ದೆ ಹಾಗೂ ನಿಯಮಗಳ ಅಡಿಯಲ್ಲಿ ಅಧಿಸೂಚಿತ ಅರಣ್ಯ ಪ್ರದೇಶದಲ್ಲಿ ಮಂಜೂರು ಮಾಡಲಾದ ರೈತರ ಸಾಗುವಳಿ ಭೂಮಿಗಳನ್ನು ಅರಣ್ಯ ಭೂಮಿ ಎಂದು ಇಂಡೀಕರಣ ಮಾಡುತ್ತಿರುವುದರಿಂದ ಆಗಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಸಂತ್ರಸ್ಥರಿಗೆ ಪರಿಹಾರ ಒದಗಿಸಬೇಕು.

ಅರಣ್ಯಭೂಮಿ ಒತ್ತುವರಿಗೆ ಸಂಬಂಧಿಸಿದಂತೆ ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ 2011ರ ವಿಶೇಷ ನ್ಯಾಯಾಲಯದಲ್ಲಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸುವ ಮೂಲಕ ರೈತರಿಗೆ ತೊಂದರೆಕೊಡಲಾಗಿದೆ. ಈ ವಿಷಯವೂ ಚರ್ಚೆಗೆ ಬಂದಿದ್ದು

 ಕರ್ನಾಟಕ ಅರಣ್ಯ ಕಾಯ್ದೆ-1963ರ ಸೆಕ್ಷನ್ 04ರ ಅಡಿಯಲ್ಲಿ ಮೀಸಲು ಅರಣ್ಯ ಪ್ರಾಥಮಿಕ ಅಧಿಸೂಚನೆಯಿಂದ ರೈತರ ಹಿಡುವಳಿ ಭೂಮಿ, ಬಗರ್ ಹುಕುಂ ಭೂಮಿ ಹಾಗೂ ಜನವಸತಿ ಪ್ರದೇಶಗಳನ್ನು ಕೈಬಿಟ್ಟು ಸೆಕ್ಷನ್ 17ರ ಅಡಿಯಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿ,  ಭೂಮಿ ಹಾಗೂ ವಸತಿ ಹಕ್ಕನ್ನು ಮಂಜೂರು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು. 

ಸುಪ್ರೀಂಕೋರ್ಟ್‌ನಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿಗೆ ಸಂಬಂಧಿಸಿದಂತೆ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿದೆ. ಇದನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಕ್ರಮವಹಿಸಬೇಕು ಎಂದು ಚರ್ಚಿಸಲಾಯಿತು. ಡಿನೋಟಿಫೈ ವಿಷಯವೂ ಚರ್ಚೆ ಗೆ ಬಂದಿದ್ದು ನ್ಯಾಯಾಲಯಕ್ಕೆ ಐಎ ಹಾಕಿ 6 ತಿಂಗಳು ಕಳೆದಿದ್ದು ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನ ಸಂಬಂಧ ಪಟ್ಟ ಅಧಿಕಾರಿಗಳು ಮುಂದಿನ ಸಭೆಯಲ್ಲಿ ತಿಳಿಸಲು ಸೂಚಿಸಲಾಯಿತು. 

ಈ ಕುರಿತು ಮಾತನಾಡಿದ ಮಲೆನಾಡ ರೈತ ಹೋರಾಟ ಸಮಿತಿಯ ಸಂಚಾಲಕ ತೀನಾ ಶ್ರೀನಿವಾಸ್ ಸಭೆ ನಢದಿರುವುದು. ಸಚಿವರ ತೀರ್ಮಾನ ತೃಪ್ತಿ ತಂದಿದೆ. ಮುಂದಿನ ತಿಂಗಳ ಮೊದಲವಾರದಲ್ಲಿ ಮತ್ತೊಂದು ಸಭೆ ಸೇರಲಿದ್ದೇವೆ ಎಂದರು. 

ಸಭೆಯಲ್ಲಿ ಸಂಬಂಧಪಟ್ಟ ವಿವಿಧ ಇಲಾಖೆ ಉನ್ನತ ಅಧಿಕಾರಿಗಳು, ರೈತ ಮುಖಂಡರಾದ ಸಾಗರ ಜಯಂತ್, ತಿ.ನ. ಶ್ರೀನಿವಾಸ್, ಶ್ರೀಕರ್, ಬಿ.ಎ.  ರಮೇಶ್ ಹೆಗಡೆ, ದಿನೇಶ್ ಶಿರವಾಳ, ಧರ್ಮಪ್ಪ, ದುಗೂರು ಪರಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close