ಸುದ್ದಿಲೈವ್/ಸಾಗರ
ಬೈಕ್ ನಲ್ಲಿ ಹೋಗುವಾಗ ದೆವ್ವ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ವಿಡಿಯೋ ಬಗ್ಗೆ ಜಿಲ್ಲಾ ಪೊಲೀಸ್ ಇಲಾಖೆ ಸ್ಪಷ್ಟನೆ ಹಾಗೂ ಖಡಕ್ ಎಚ್ಚರಿಕೆಯನ್ನ ನೀಡಿದೆ.
ದಿನಾಂಕಃ 27-10-2024 ರಂದು ರಾತ್ರಿ ಸಾಗರ ತಾಲ್ಲೂಕಿನ ಕಾರ್ಗಲ್ ನ ಸಮೀಪದ ಕಂಚಿಕೈ ರಸ್ತೆಯಲ್ಲಿ ಎರಡು ಜನ ಬೈಕ್ ಸವಾರರಿಗೆ ದೆವ್ವ ಎದುರಾಗಿ ಒಬ್ಬರಿಗೆ ತುಂಬಾ ಸೀರಿಯಸ್ ಆಗಿ ಮಣಿಪಾಲ್ ಆಸ್ಪತ್ರೆಗೆ ಮತ್ತು ಇನ್ನೊಬ್ಬರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿರುತ್ತಾರೆಂದು ಪೋಟೋ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.
ಇದು ಸುಳ್ಳು ಸುದ್ಧಿಯಾಗಿದ್ದು, ಇಂತಹ ಪ್ರಕರಣಗಳು ಎಲ್ಲೂ ಕಂಡು ಬಂದಿಲ್ಲ. ಒಬ್ಬನ ಎಡಗೈಗೆ ಬಲವಾದ ಪೆಟ್ಟು ಬಿದ್ದು ಮಾಂಸ ಖಂಡಗಳು ಹೊರಗೆ ಬಂದಿದೆ. ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡುವ ಫೊಟೊ ಸಹ ವೈರಲ್ ಆಗಿದ್ದು, ಇಂತಹ ಪ್ರಕರಣಗಳು ಎಲ್ಲೂ ಕಂಡು ಬಂದಿಲ್ಲ. ಯಾವ ಆಸ್ಪತ್ರೆಯಲ್ಲಿಯೂ ಯಾರೂ ಸಹ ಅಡ್ಮಿಟ್ ಆಗಿಲ್ಲ. ಇದೊಂದು ಕಿಡಿಗೇಡಿಗಳ ಕೃತ್ಯವಾಗಿದ್ದು ಸಾರ್ವಜನಿಕರು ಭಯ ಪಡುವ ಅವಶ್ಯಕತೆ ಇಲ್ಲವೆಂದು ಇಲಾಖೆ ಸ್ಪಷ್ಟನೆ ನೀಡಿದೆ.
ಸುಳ್ಳು ಸುದ್ಧಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು ಹಾಗೂ ಶೇರ್ ಮಾಡುವುದು ಕಾನೂನು ರೀತ್ಯಾ ಅಪರಾಧವಾಗಿದ್ದು, ಈ ರೀತಿ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಇಲಾಖೆ ಎಚ್ಚರಿಸಿದೆ.